Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರ ಅರಸನೂ ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ - ನಾನೇ ಆದಿ, ಅಂತವೂ ನಾನೇ; ನಾನು ಹೊರತು ಯಾವ ದೇವರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:6
37 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.


ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.


ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು, ನಾನೇ ಆದಿಯೂ, ನಾನೇ ಅಂತ್ಯ


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.


ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;


ನೀವು ಇದನ್ನೆಲ್ಲಾ ಆಲೋಚಿಸಿ ಆಕಾಶದಲ್ಲಿಯೂ ಮತ್ತು ಭೂಮಿಯಲ್ಲಿಯೂ ಯೆಹೋವನೊಬ್ಬನೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುವುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿಡಬೇಕು.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


“ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್ ದೇವರೇ, ಸೇನಾಧೀಶ್ವರನಾದ ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ, ಪರಲೋಕ ಭೂಲೋಕಗಳನ್ನು ಉಂಟುಮಾಡಿದವನು ನೀನೇ.


ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.


ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”


“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ”


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.


ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು