Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ವಿಗ್ರಹ ಕೆತ್ತುವವರೆಲ್ಲಾ ಮಟ್ಟಮಾಯವೇ; ಅವರ ಇಷ್ಟದ ಬೊಂಬೆಗಳು ಯಾತಕ್ಕೂ ಬಾರವು; ಬೊಂಬೆಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ; ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:9
43 ತಿಳಿವುಗಳ ಹೋಲಿಕೆ  

ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ!


ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ.


ವಿಗ್ರಹಗಳಲ್ಲಿ ಹಿಗ್ಗುವವರೂ, ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.


ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಕುಲದೇವರಿಗೆ ಬದಲಾಗಿ ದುರ್ಗಾಭಿಮಾನಿ ದೇವರನ್ನು ಘನಪಡಿಸುವನು; ಪೂರ್ವಿಕರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ವಸ್ತುಗಳಿಂದಲೂ ಸೇವಿಸುವನು.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.


ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.


ಕಣ್ಣಿದ್ದರೂ ಕುರುಡಾದ, ಕಿವಿಯಿದ್ದರೂ ಕಿವುಡಾದ ಜನರನ್ನು ಕರೆ.


ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!


ಅವುಗಳನ್ನು ಮಾಡುವವರು, ಅವುಗಳಲ್ಲಿ ಭರವಸವಿಡುವವರು ಅವುಗಳಂತೆಯೇ.


ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ. ಮನುಷ್ಯರು ಕೆತ್ತಿದ ಕಲ್ಲು ಮತ್ತು ಮರಗಳ ಬೊಂಬೆಗಳಷ್ಟೇ. ಆದುದರಿಂದ ಅವುಗಳನ್ನು ಹಾಳುಮಾಡುವುದು ಅವರಿಗೆ ಸಾಧ್ಯವಾಯಿತು.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.


ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು.


ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.


ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ. ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು.


ವಿಗ್ರಹಗಳನ್ನು ಕೆತ್ತುವವರೆಲ್ಲರೂ ನಾಚಿಕೆಗೀಡಾಗಿ ಮಾನಭಂಗಪಡುವರು. ಹೌದು, ಒಟ್ಟಿಗೆ ಅವಮಾನದಲ್ಲಿ ಮುಳುಗುವರು.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.


ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ.


ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.


ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು