ಯೆಶಾಯ 45:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ರಹಸ್ಯದಲ್ಲಿ ನುಡಿದವನಲ್ಲ, ಅಧೋಲೋಕದೊಳಗಿಂದ ಮಾತನಾಡಿದವನಲ್ಲ. ಶೂನ್ಯವನ್ನೋ ಎಂಬಂತೆ, ‘ನನ್ನನ್ನು ಹುಡುಕಿರಿ’ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ಸರಿಯಾದ ಮಾತುಗಳನ್ನೇ ಆಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿ |