Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:20
32 ತಿಳಿವುಗಳ ಹೋಲಿಕೆ  

ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ


ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು? ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ.


ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.


ಅವುಗಳನ್ನು ಮಾಡುವವರೂ, ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಓಹೋ, ಬಾಬೆಲಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಯೆಹೋವನು ತನ್ನ ಆಲಯವನ್ನು ನಾಶ ಮಾಡಿದವರಿಗೆ ಮುಯ್ಯಿತೀರಿಸಿದ್ದಾನೆ ಎಂಬ ಸಮಾಚಾರವನ್ನು ಚೀಯೋನಿನಲ್ಲಿ ಪ್ರಕಟಿಸುವುದಕ್ಕೆ ಹೋಗುತ್ತಾರಲ್ಲಾ.


ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ”


ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.


ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.


ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ, “ನಿನ್ನ ಕೈಯಿಂದ ನಿನ್ನ ಜನರನ್ನು ರಕ್ಷಿಸಲಾರದೆ ಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಕೇಳಿದನು.


ಹೇಗೆಂದರೆ “ಅರಾಮ್ ರಾಜರ ದೇವತೆಗಳು ಅವರಿಗೆ ಜಯವನ್ನು ಅನುಗ್ರಹಿಸುವೆ ಎಂದು ತಿಳಿದು; ನಾನೂ ಅವುಗಳಿಗೆ ಯಜ್ಞಸಮರ್ಪಿಸುವೆನು, ಆಗ ನನಗೂ ಜಯವಾಗುವುದು” ಎಂದುಕೊಂಡು ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಯಜ್ಞಸಮರ್ಪಿಸಿದನು. ಆದರೆ ಆ ದೇವತೆಗಳ ದೆಸೆಯಿಂದ ಅವನಿಗೂ ಮತ್ತು ಎಲ್ಲಾ ಇಸ್ರಾಯೇಲರಿಗೂ ಕೇಡು ಉಂಟಾಯಿತು.


ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು.


ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು?


ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.


ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.


ಆದರೂ ಅಂತ್ಯದಲ್ಲಿ ನಾನು ಮೋವಾಬಿನ ದುರವಸ್ಥೆಯನ್ನು ತಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ”. ಮೋವಾಬಿನ ವಿಷಯವಾದ ನ್ಯಾಯತೀರ್ಪು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು