Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನೂ ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನೂ ನಾನು ನಿನಗೆ ಕೊಡುವೆನು. ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದನ್ನು ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರೆತ್ತಿ ಕರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನನ್ನು ಹೆಸರು ಹಿಡಿದು ಕರೆಯುವ ಯೆಹೋವ ದೇವರು ನಾನೇ! ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪಗಳನ್ನೂ ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:3
15 ತಿಳಿವುಗಳ ಹೋಲಿಕೆ  

ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.


ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.


ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.


ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.


ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.


ಬಾಬೆಲ್ ಆಕಾಶದ ತನಕ ಬೆಳೆದು ಎತ್ತರವಾಗಿಯೂ ಮತ್ತು ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ, ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು.’ ಇದು ಯೆಹೋವನ ನುಡಿ.”


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.


ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.


ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.


ಈಗ ಇಸ್ರಾಯೇಲರ ದೇವರಾದ ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನಿಗೆ ನುಡಿದಿದ್ದೆಲ್ಲವೂ ಸ್ಥಿರವಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು