Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಬೆಳಕನ್ನು, ಕತ್ತಲನ್ನು ನಿರ್ಮಿಸಿದವನು, ಮೇಲನ್ನೂ, ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇನ್ನು ಯಾವನೂ ಅಲ್ಲ, ನಾನು ಬೆಳಕಿಗೂ ಕತ್ತಲಿಗೂ ಸೃಷ್ಟಿಕರ್ತನು, ಮೇಲನ್ನೂ ಕೇಡನ್ನೂ ಬರಮಾಡುವವನು, ಈ ಸಮಸ್ತ ಕಾರ್ಯಗಳನ್ನು ನಡೆಯಿಸುವ ಯೆಹೋವನು ನಾನೇ ಎಂದು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:7
39 ತಿಳಿವುಗಳ ಹೋಲಿಕೆ  

ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?


ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.


ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ಇಗೋ, ಆತನು ವಿವೇಕಿ, ತನ್ನ ಮಾತನ್ನು ಹಿಂದಕ್ಕೆ ತೆಗೆಯದೆ ಕೇಡನ್ನು ಬರಮಾಡುವನು. ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.


ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ, ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ, ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.


ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.


ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ, ನಿನ್ನ ದೇಶವನ್ನು ಕತ್ತಲು ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.


ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.


ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ, ಇಸ್ರಾಯೇಲರ ಪಾಳೆಯಕ್ಕೂ ನಡುವೆ ಬಂದಿತು. ಅದು ಐಗುಪ್ತ್ಯರಿಗೆ ಕತ್ತಲನ್ನೂ, ಇಸ್ರಾಯೇಲರಿಗೆ ರಾತ್ರಿಯಲ್ಲಿ ಬೆಳಕನ್ನು ಕೊಟ್ಟಿದ್ದರಿಂದ ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಾಗಲಿಲ್ಲ.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.


ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.


ಬಹು ಕಾಲದ ಹಿಂದೆಯೇ ಇದನೆಲ್ಲ ಗೊತ್ತುಮಾಡಿದವನು ನಾನಲ್ಲವೇ? ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ಈಗ ನೆರವೇರಿಸಿದ್ದೇನೆ. ಆದುದರಿಂದ ಕೋಟೆ, ಕೊತ್ತಲುಗಳುಳ್ಳ ಪಟ್ಟಣಗಳನ್ನು ಹಾಳುದಿಬ್ಬಗಳನ್ನಾಗಿ ಮಾಡುವುದು ನಿನಗೆ ಸಾಧ್ಯವಾಯಿತೋ?


ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.


ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವುದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನೀನು ತಪ್ಪಿಸಿಕೊಳ್ಳಲಾಗದ ನಾಶನವು ನಿನ್ನ ಮೇಲೆ ಪಕ್ಕನೆ ಬರುವುದು.


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.


ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.


ಆತನು ಅಗಾಧ ವಿಷಯಗಳನ್ನೂ ಗೂಢಾರ್ಥಗಳನ್ನೂ ಬಯಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರವಾಗುವುದು; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ.


ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.


ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು