Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:9
22 ತಿಳಿವುಗಳ ಹೋಲಿಕೆ  

ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


“ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.


ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು. ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ?


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?


“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.


ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು.


‘ನೀನು ಹುಟ್ಟಿಸುವುದೇನು’ ಎಂದು ತಂದೆಯನ್ನು ಕೇಳುವವನ ಪಾಡು ಪಾಡೇ! ‘ನೀನು ಹೆರುವುದೇನು’ ಎಂದು ಸ್ತ್ರೀಯನ್ನು ಕೇಳುವವನ ಗತಿ ಗತಿಯೇ!


ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ನೀನು ನನ್ನನ್ನು ಜೇಡಿಮಣ್ಣಿನಿಂದಲೇ ರೂಪಿಸಿದ್ದೀಯೆಂದು ಕೃಪೆಮಾಡಿ ನೆನಸಿಕೋ. ನನ್ನನ್ನು ತಿರುಗಿ ಮಣ್ಣಾಗುವಂತೆ ಮಾಡುವೆಯಾ?


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು