Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:10
38 ತಿಳಿವುಗಳ ಹೋಲಿಕೆ  

ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.


ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.


ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ, ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ ತನಗೆ ಬೇಕಾದದ್ದನ್ನು ಮಾಡುತ್ತಾನೆ.


ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು.


ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ.


ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.


ಹಾಗೆಯೇ ದೇವರು ತನ್ನ ಸಂಕಲ್ಪವು ಬದಲಾಗಲಾರದ್ದೆಂಬುದನ್ನು, ವಾಗ್ದಾನದ ಬಾಧ್ಯಸ್ಥರಿಗೆ ಬಹು ಸ್ಪಷ್ಟವಾಗಿ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದನು.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಅನಾದಿಕಾಲದಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ’ ಎಂದು ಬರೆದದೆ.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವುದೇನೆಂದರೆ, “ನಾನು ಸಂಕಲ್ಪಿಸಿದ್ದೇ ನೆರವೇರುವುದು, ಉದ್ದೇಶಿಸಿದ್ದೇ ಖಂಡಿತವಾಗಿ ನಿಲ್ಲುವುದು.


ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.


ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು.


ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ.


ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು. ನಾನು ತಟ್ಟನೆ ನಡೆಸಲು ಅವು ನೆರವೇರಿದವು.


ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು? ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು.


ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;


ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.


ಖಡ್ಗಕ್ಕೆ ತಪ್ಪಿಸಿಕೊಂಡವರು ಸ್ವಲ್ಪ ಜನ ಮಾತ್ರವೇ ಆಗಿ ಐಗುಪ್ತದಿಂದ ಯೆಹೂದಕ್ಕೆ ಹಿಂದಿರುಗುವರು; ಆಗ ಐಗುಪ್ತಕ್ಕೆ ಹೋಗಿ ಪ್ರವಾಸಿಸುತ್ತಿರುವ ಯೆಹೂದದ ಉಳಿದ ಜನರೆಲ್ಲರೂ ನನ್ನ ಮಾತು ನಡೆಯುವುದೋ ಅಥವಾ ತಮ್ಮ ಮಾತು ನಡೆಯುವುದೋ ಎಂದು ತಿಳಿದುಕೊಳ್ಳುವರು.


ದಂಡನೆಯ ದಿನದಲ್ಲಿ ಎಫ್ರಾಯೀಮು ಹಾಳಾಗುವುದು; ಇಸ್ರಾಯೇಲ್ ಕುಲಗಳ ಭವಿಷ್ಯತ್ತಿನ ನಿಶ್ಚಯವನ್ನು ತಿಳಿಯಪಡಿಸಿದ್ದೇನೆ.


ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.


ಆದಕಾರಣ ಕರ್ತನಾದ ನಾನು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ನನ್ನ ಉದ್ದೇಶವನ್ನೆಲ್ಲಾ ನೆರವೇರಿಸಿದ ಮೇಲೆ, “ಅಶ್ಶೂರದ ರಾಜನ ಹೃದಯದ ದೊಡ್ಡಸ್ತಿಕೆಯ ಫಲಕ್ಕೂ, ಅವನ ಗರ್ವದೃಷ್ಟಿಯ ಮೆರೆದಾಟಕ್ಕೂ ತಕ್ಕ ದಂಡನೆಯನ್ನು ಮಾಡುವೆನು.”


ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು