ಯೆಶಾಯ 46:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಾನು ಒಳ್ಳೆಯ ಕಾರ್ಯಗಳನ್ನು ಮಾಡುವೆನು. ನನ್ನ ಜನರನ್ನು ಬೇಗನೆ ರಕ್ಷಿಸುವೆನು. ಚೀಯೋನಿಗೆ, ಅಂದರೆ ನನ್ನ ಅದ್ಭುತವಾದ ಇಸ್ರೇಲಿಗೆ ರಕ್ಷಣೆಯನ್ನು ತರುವೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು. ಅಧ್ಯಾಯವನ್ನು ನೋಡಿ |