Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾಕೋಬವಂಶವೇ, ಇಸ್ರಾಯೇಲ್ ಸಂತಾನಶೇಷವೇ, ನನ್ನ ಮಾತಿಗೆ ಕಿವಿಗೊಡಿರಿ; ನಿಮ್ಮನ್ನು ಗರ್ಭದಿಂದ ಹೊರುತ್ತಿದ್ದೇನೆ, ಹುಟ್ಟಿದಂದಿನಿಂದ ವಹಿಸುತ್ತಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:3
24 ತಿಳಿವುಗಳ ಹೋಲಿಕೆ  

ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಮುನ್ನಡೆಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೊತ್ತನಲ್ಲವೇ?” ಎಂದು ನಿಮಗೆ ಹೇಳಿದೆನು.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.


ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.


ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


‘ನಾನು ಐಗುಪ್ತ್ಯರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತುಕೊಂಡು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.


ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.


ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.


ನಿನ್ನ ದೇವರಾದ ಯೆಹೋವನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ಕೇಳಿರುವನು, ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿತೀರಿಸಾನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಯೆಹೋವನನ್ನು ಪ್ರಾರ್ಥಿಸು’” ಎಂದು ಹೇಳಿದರು.


ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.


ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.


ಆ ದಿನದಲ್ಲಿ ಇಸ್ರಾಯೇಲರೊಳಗೆ ಉಳಿದವರು, ಯಾಕೋಬಿನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲರ ಸದಮಲಸ್ವಾಮಿಯನ್ನು ನಂಬಿಗಸ್ತರಾಗಿ ಆಧಾರಮಾಡಿಕೊಳ್ಳುವರು.


ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು