ಯೆಶಾಯ 46:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಹಳ ಸಮಯದ ಹಿಂದೆ ನಡೆದ ಸಂಗತಿಗಳನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ದೇವರೆಂಬುದನ್ನು ಜ್ಞಾಪಕ ಮಾಡಿಕೊಳ್ಳಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ಆ ಸುಳ್ಳುದೇವರುಗಳು ನನ್ನ ಹಾಗೆ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ. ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?