Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಕನ್ನಿಕೆಯೇ, ಬಾಬಿಲೋನಿನ ಕುಮಾರಿಯೇ ಕೆಳಕ್ಕಿಳಿದು ಧೂಳಿನ ಮೇಲೆ ಕುಳಿತಿಕೊ. ಕಸ್ದೀಯರ ಕುಮಾರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೊ! ಈಗ ನೀನು ಯಜಮಾನಿಯಲ್ಲ. ನೀನು ಕೋಮಲವಾದ ತರುಣಿ ಎಂದು ಜನರು ನಿನ್ನ ಬಗ್ಗೆ ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ, ಕೆಳಕ್ಕೆ ಇಳಿದುಬಂದು, ಧೂಳಿನಲ್ಲಿ ಕುಳಿತುಕೋ! ಕಸ್ದೀಯರ ಪುತ್ರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಏಕೆಂದರೆ ಇನ್ನು ಮೇಲೆ ನಿನ್ನನ್ನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:1
36 ತಿಳಿವುಗಳ ಹೋಲಿಕೆ  

ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು.


ಹಾಳಾಗುವುದಕ್ಕಿರುವ ಬಾಬೆಲ್ ಪಟ್ಟಣವೇ, ನೀನು ನನಗೆ ಮಾಡಿದ್ದಕ್ಕೆ ಮುಯ್ಯಿ ತೀರಿಸುವವನು ಧನ್ಯನು.


ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.


ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.


ಯೆಹೋವನು ಅವನನ್ನು ಕುರಿತು ಹೇಳುವುದೇನೆಂದರೆ, ‘ಕನ್ನಿಕೆಯಾಗಿರುವ ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯಮಾಡುತ್ತಾಳೆ, ಯೆರೂಸಲೇಮ್ ಕುವರಿಯು ನಿನ್ನ ಹಿಂದೆ ತಲೆಯಾಡಿಸುತ್ತಾಳೆ.


ದೀನರನ್ನು ಉದ್ಧರಿಸುವವನೂ, ಗರ್ವದ ಕಣ್ಣುಳ್ಳವರನ್ನು ತಗ್ಗಿಸಿಬಿಡುವವನೂ ನೀನಲ್ಲವೋ?


ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.


“‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.


ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.


ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.


ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!


ಆತನು ಹೆಮ್ಮೆಯಿಂದ ವಾಸಿಸುವವರನ್ನು ಇಳಿಸಿದ್ದಾನೆ. ಅವರ ಉನ್ನತ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ, ನೆಲಸಮಮಾಡಿ ಧೂಳಿಗೆ ತಂದಿದ್ದಾನೆ.


ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.


ಅವನ ವೈಭವವನ್ನು ತಡೆದುಬಿಟ್ಟಿದ್ದೀ; ಅವನ ಸಿಂಹಾಸನವನ್ನು ನೆಲಕ್ಕುರುಳಿಸಿದ್ದೀ.


ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು.


ಯೋಬನು ಒಂದು ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯಲ್ಲಿ ಕುಳಿತುಕೊಂಡಿದ್ದನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”


ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.


ಯೆಹೋವನು ಪ್ರವಾದಿಯಾದ ಯೆರೆಮೀಯನ ಮೂಲಕ ಕಸ್ದೀಯರ ದೇಶವಾದ ಬಾಬೆಲಿನ ವಿಷಯವಾಗಿ ಪ್ರಕಟಿಸಿದ ವಾಕ್ಯ.


ಆದುದರಿಂದ ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ತೀಕ್ಷ್ಣರೋಷದಿಂದ ಆಕಾಶಮಂಡಲವನ್ನು ನಡುಗಿಸಿ, ಭೂಲೋಕವನ್ನು ಅದರ ಸ್ಥಳದಿಂದ ಕದಲಿಸಿ ನಡುಗಿಸುವೆನು.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಸಮುದ್ರ ಹಾಗೂ ಅಡವಿಯ ವಿಷಯವಾದ ದೈವೋಕ್ತಿ. ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿಯಂತೆ ಅರಣ್ಯದ ಕಡೆಯ ಭಯಂಕರ ದೇಶದಿಂದ (ದೊಡ್ಡ ಅಪಾಯ) ಬರುತ್ತದೆ ಎಂಬ


ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಮೇಲೂ, ಲೇಬ್ ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.


ನಾವು ನಿಂದೆಯನ್ನು ಕೇಳಿ ನಾಚಿಕೆಗೊಂಡೆವು, ‘ಯೆಹೋವನ ಆಲಯದ ಪವಿತ್ರಸ್ಥಾನಗಳನ್ನು ಮ್ಲೇಚ್ಛರು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಮುಚ್ಚಿಕೊಂಡಿದೆ’ ಎಂಬುದಾಗಿ ಅಂದುಕೊಳ್ಳುತ್ತಿರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು