Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು, “ನನ್ನನ್ನು ಯಾರೂ ನೋಡರು?” ಎಂದುಕೊಂಡಿದ್ದಿ. ನನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಎಂದು ಯೋಚಿಸಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಮಾಡಿದ ಕೇಡಿಗೆ ಭಯಪಡದೆ ನನ್ನನ್ನು ಯಾರೂ ನೋಡರು ಎಂದುಕೊಂಡಿದ್ದೀ; ನಿನ್ನ ಜ್ಞಾನವಿವೇಕಗಳು ನಿನ್ನನ್ನು ಸೊಟ್ಟಗೆ ತಿರುಗಿಸಿದ್ದರಿಂದ ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲವೆಂದು ಯೋಚಿಸಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ದುಷ್ಕೃತ್ಯಗಳನ್ನು ಮಾಡುತ್ತಿರುವೆ, ಆದರೂ ನೀನು ಸುರಕ್ಷಿತಳಾಗಿದ್ದೇನೆ ಎಂದುಕೊಂಡಿರುವೆ. ‘ನಾನು ಮಾಡಿದ ದುಷ್ಕೃತ್ಯಗಳನ್ನು ಯಾರೂ ನೋಡುವದಿಲ್ಲ’ ಎಂದು ನೀನು ಭಾವಿಸಿಕೊಂಡಿರುವೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ಕಾಪಾಡುತ್ತವೆ ಎಂದು ತಿಳಿದುಕೊಂಡಿರುವೆ. ‘ನಾನೇ ಮಹಾವ್ಯಕ್ತಿ, ನನ್ನಂಥ ಮಹಾವ್ಯಕ್ತಿ ಬೇರೆ ಯಾರೂ ಇಲ್ಲ’ ಎಂದು ನೀನು ಅಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:10
23 ತಿಳಿವುಗಳ ಹೋಲಿಕೆ  

ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ!


ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.


ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.


ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”


ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.


ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”


ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.


ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.


ನೀವು ನಿಮ್ಮೊಳಗೆ, “ಮೃತ್ಯುವಿನಿಂದ ಒಡಂಬಡಿಕೆಯನ್ನು ಪಡೆದುಕೊಂಡು ಪಾತಾಳದೊಡನೆ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತ ಬಾಧೆಯು ದೇಶದೊಳಗೆ ಹಾದುಹೋಗುವಾಗ ಅದು ನಮ್ಮನ್ನು ಮುಟ್ಟದು; ನಾವು ಸುಳ್ಳನ್ನೇ ಆಶ್ರಯಿಸಿಕೊಂಡು ಮೋಸದಲ್ಲಿ ಮೊರೆಹೊಕ್ಕಿದ್ದೇವೆ” ಎಂದು ಅಂದುಕೊಂಡಿದ್ದೀರಿ.


ಆ ದುಷ್ಟನು ತನ್ನೊಳಗೆ, “ದೇವರು ಇವನನ್ನು ಬಿಟ್ಟು ವಿಮುಖನಾಗಿದ್ದಾನೆ; ಆತನು ನೋಡುವುದೇ ಇಲ್ಲ” ಅಂದುಕೊಳ್ಳುತ್ತಾನೆ.


“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕುಳಿತುಕೊಳ್ಳುವುದಿಲ್ಲ, ಪುತ್ರಶೋಕವನ್ನು ಅನುಭವಿಸುವುದಿಲ್ಲ” ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.


ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು