Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 47:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ, ಈಜಾಡುವ ಬಟ್ಟೆಯ ನೆರಿಗೆಯನ್ನು ಹರಿದುಬಿಟ್ಟು, ಬೆತ್ತಲಾಗಿ ನದಿಗಳನ್ನು ಹಾದುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬೀಸುವ ಕಲ್ಲನು ಹಿಡಿ, ಹಿಟ್ಟಿಗಾಗಿ ನೆರಿಗೆಯನ್ನು ಹರಿ, ಮುಸುಕನ್ನು ತೆಗೆದುಹಾಕಿ ಹೊಳೆಗಳನ್ನು ಹಾದುಹೋಗು, ನಡೆ ಬರೆಗಾಲಿನಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಬೀಸುವ ಕಲ್ಲನ್ನು ಹಿಡಿದು ಹಿಟ್ಟು ಬೀಸು, ಮುಸುಕನ್ನು ತೆಗೆದುಹಾಕಿ ಈಜಾಡುವ ನೆರಿಗೆಯನ್ನು ಹರಿದುಬಿಟ್ಟು ಬೆತ್ತಲೆಕಾಲಾಗಿ ಹೊಳೆಗಳನ್ನು ಹಾದುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈಗ ನೀನು ದಾಸಿಯಾಗಿ ಕೆಲಸ ಮಾಡಬೇಕು. ನಿನ್ನ ಮನೋಹರವಾದ ಉಡುಪನ್ನು ತೆಗೆದುಹಾಕು. ಬೀಸುವ ಕಲ್ಲನ್ನು ತೆಗೆದುಕೊಂಡು ಧಾನ್ಯವನ್ನು ಬೀಸು. ಜನರು ನಿನ್ನ ತೊಡೆಗಳನ್ನು ನೋಡುವ ತನಕ ನಿನ್ನ ಉಡುಪನ್ನು ಎತ್ತಿ ಹೊಳೆಯನ್ನು ದಾಟು. ನಿನ್ನ ದೇಶವನ್ನು ಬಿಟ್ಟುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಬೀಸುವ ಕಲ್ಲನ್ನು ಹಿಡಿದು, ಹಿಟ್ಟನ್ನು ಬೀಸು. ಮುಸುಕನ್ನು ತೆಗೆದುಹಾಕಿ, ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ, ನದಿಗಳನ್ನು ಹಾದುಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 47:2
22 ತಿಳಿವುಗಳ ಹೋಲಿಕೆ  

ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.


ಈ ರೀತಿಯಾಗಿ ಅಶ್ಶೂರದ ಅರಸನು ಐಗುಪ್ತದ ಸೆರೆಯವರನ್ನೂ, ಕೂಷಿನ ಕೈದಿಗಳನ್ನೂ ಅವರು ದೊಡ್ಡವರಾಗಲಿ, ಚಿಕ್ಕವರಾಗಲಿ ಬಟ್ಟೆ, ಪಾದರಕ್ಷೆಗಳಿಲ್ಲದೆ ಬೆತ್ತಲೆಯಾಗಿ ಐಗುಪ್ತದ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.


ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು.


ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”


ನನ್ನ ಹೆಂಡತಿಯು ಮತ್ತೊಬ್ಬನಿಗೆ ಧಾನ್ಯ ಬೀಸುವ ದಾಸಿಯಾಗಲಿ, ಇತರರು ಆಕೆಯನ್ನು ಸಂಗಮಿಸಲಿ!


ಶಾಫೀರಿನವರೇ, ಬೆತ್ತಲೆಯಾಗಿ ಅವಮಾನಪಟ್ಟು ತೊಲಗಿರಿ. ಚಾನಾನಿನವರು ಹೊರಡರು. ಬೇತೆಚೇಲಿನ ಗೋಳಾಟವು ಅದರ ಬೆಂಬಲವನ್ನು ನಿಮಗೆ ತಪ್ಪಿಸುವುದು.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ಕಿತ್ತು, ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸುವೆನು ಅವಳನ್ನು ಬೆಂಗಾಡಾಗಿಸಿ, ಮರುಭೂಮಿಯ ಸ್ಥಿತಿಗೆ ತಂದು, ನೀರಡಿಕೆಯಿಂದ ಸಾಯಿಸುವೆನು.


ಯುವಭಟರಿಗೆ ಬೀಸುವ ಕಲ್ಲನ್ನು ಹೊರುವ ಗತಿ ಬಂತು; ಮಕ್ಕಳು ಸೌದೆಹೊರೆ ಹೊತ್ತು ಮುಗ್ಗರಿಸಬೇಕಾಯಿತು.


ಅವನ ದೇಶಕ್ಕೆ ಕಾಲವು ಸಮೀಪಿಸುವ ತನಕ ಸಕಲ ಜನಾಂಗಗಳು ಅವನಿಗೂ, ಅವನ ಮಗನಿಗೂ ಮತ್ತು ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆ ಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.


“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.


ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.


ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.


ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.


ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.


ಇದಲ್ಲದೆ ನಾನು ಅವುಗಳಲ್ಲಿ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ, ಬೀಸುವ ಕಲ್ಲಿನ ಶಬ್ದವನ್ನೂ, ದೀಪದ ಬೆಳಕನ್ನೂ ನಿಲ್ಲಿಸಿಬಿಡುವೆನು.


ಆದುದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ, ಗಡ್ಡದ ಅರ್ಧ ಭಾಗವನ್ನು ಬೋಳಿಸಿ, ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು