ಯೆಶಾಯ 47:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾನು ನನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವತ್ತನ್ನು ಹೊಲೆಗೆಡಿಸಿದೆನು. ಅವರನ್ನು ನಿನ್ನ ಕೈವಶ ಮಾಡಳು, ನೀನು ಅವರನ್ನು ಕರುಣಿಸದೆ ಬಹುಭಾರವಾದ ನೊಗವನ್ನು ಹೊರಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ನನ್ನ ಜನರ ಮೇಲೆ ನಾನು ಸಿಟ್ಟಿಗೆದ್ದಿದ್ದೆನು. ಅವರು ನನಗೆ ಸೇರಿದವರಾಗಿದ್ದಾರೆ. ಆದರೆ ನಾನು ಅವರ ಮೇಲೆ ಸಿಟ್ಟಾದೆನು. ಆದ್ದರಿಂದ ನಾನು ಅವರನ್ನು ತಳ್ಳಿಬಿಟ್ಟೆನು. ಅವರನ್ನು ನಿನಗೆ ಕೊಟ್ಟೆನು; ನೀನು ಅವರನ್ನು ಶಿಕ್ಷಿಸಿದೆ. ಅವರ ಮೇಲೆ ಕರುಣೆ ತೋರಿಸಲಿಲ್ಲ. ವೃದ್ಧರೂ ಕಷ್ಟದ ಕೆಲಸ ಮಾಡುವಂತೆ ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ. ಅಧ್ಯಾಯವನ್ನು ನೋಡಿ |