Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ, “ಯಾಕೋಬನ ಮನೆತನದವರೇ, ನನ್ನ ಮಾತುಗಳನ್ನು ಕೇಳಿರಿ. ಜನರು ನಿಮ್ಮನ್ನು ಇಸ್ರೇಲ್ ಎಂದು ಕರೆಯುತ್ತಾರೆ. ನೀವು ಯೆಹೂದದ ಕುಟುಂಬದವರು. ನೀವು ಯೆಹೋವನ ಹೆಸರಿನಲ್ಲಿ ಒಡಂಬಡಿಕೆ ಮಾಡಿಕೊಳ್ಳುವಿರಿ. ನೀವು ಯೆಹೋವನ ನಾಮವನ್ನು ಸ್ತುತಿಸುವಿರಿ, ಆದರೆ ನೀವು ಇವುಗಳನ್ನು ಮಾಡುವಾಗ ನಂಬಿಗಸ್ತರಾಗಿರುವದಿಲ್ಲ; ಯಥಾರ್ಥರಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:1
48 ತಿಳಿವುಗಳ ಹೋಲಿಕೆ  

‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


“ಇಸ್ರಾಯೇಲ್ ವಂಶಸ್ಥರೇ, ಸಮೂಹವಾಗಿ ದೇವರಾದ ಕರ್ತನನ್ನು ಕೊಂಡಾಡಿರಿ” ಎಂದು ಹಾಡುತ್ತಾರೆ.


ಜನರು, “ಯೆಹೋವನ ಜೀವದಾಣೆ” ಎಂದರೂ ಆ ಆಣೆಯು ಸುಳ್ಳೇ ಸುಳ್ಳು ಎಂದು ಯೆಹೋವನು ನುಡಿಯುತ್ತಾನೆ.


ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು; ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.


ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.


ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.


ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,


ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.


ದೇವರ ವಾಕ್ಯವು ವ್ಯರ್ಥವಾಯಿತೆಂದು ನಾವು ಭಾವಿಸಬಾರದು. ಯಾಕೆಂದರೆ ಇಸ್ರಾಯೇಲ ವಂಶದಲ್ಲಿ ಹುಟ್ಟಿದವರೆಲ್ಲರೂ ಇಸ್ರಾಯೇಲ್ಯರಲ್ಲ.


ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,


ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನನ್ನು ಕುರಿತು “ಇಗೋ, ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ” ಎಂದು ಹೇಳಿದನು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.


(ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು; ಆದರೆ ನಾವು ನಿನ್ನ ನಾಮವನ್ನೇ ಹೊಗಳುವೆವು, ಸ್ತುತಿಸುವೆವು.


ನಿನ್ನ ಒರತೆಗಳು ಬಯಲಿನಲ್ಲಿಯೂ, ನಿನ್ನ ಕಾಲುವೆಗಳು ಬೀದಿಗಳಲ್ಲಿಯೂ ಹರಡಿ ಹರಿಯುವುದು ಹಿತವೇ?


ನೀವು ದೇವರಿಗೆ, “ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.


ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಿದ್ದಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ. ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾವಿಧಿಗಳನ್ನು, ಧರ್ಮನಿಯಮಗಳನ್ನು ಅನುಸರಿಸುವುದಿಲ್ಲ.


ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.


ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.


“‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.


ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.


ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.


ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.


ನಾಮಾನನು ಸ್ವಲ್ಪ ದೂರಕ್ಕೆ ಹೋದ ನಂತರ ದೇವರ ಮನುಷ್ಯನಾದ ಎಲೀಷನ ಸೇವಕನಾದ ಗೇಹಜಿಯು ಮನಸ್ಸಿನಲ್ಲಿ, “ನೋಡು, ನನ್ನ ಯಜಮಾನನು ಆ ಅರಾಮ್ಯನಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟನಲ್ಲಾ, ಯೆಹೋವನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ ಅವನಿಂದ ಸ್ವಲ್ಪವನ್ನಾದರೂ ತೆಗೆದುಕೊಂಡು ಬರುವೆನು” ಅಂದುಕೊಂಡು ಹೊರಟನು.


ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನ್ ಎಂಬ ಸಣ್ಣ ಗೋತ್ರದವರೂ, ಗುಂಪಾಗಿ ಬರುವ ಯೆಹೂದ ಕುಲದ ಪ್ರಭುಗಳೂ, ಜೆಬುಲೂನ್, ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.


ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.


ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.


ಯಾಕೋಬ ವಂಶವೇ, “ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು