ಯೆಶಾಯ 48:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನನ್ನ ಕೈ ಭೂವಿುಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಸಿದ್ಧವಾಗಿ ನಿಲ್ಲುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಭೂಮಿಯನ್ನು ನನ್ನ ಕೈಗಳಿಂದಲೇ ನಿರ್ಮಿಸಿದೆನು. ನನ್ನ ಬಲಗೈ ಆಕಾಶವನ್ನು ಉಂಟುಮಾಡಿತು. ನಾನು ಅವುಗಳನ್ನು ಕರೆದಾಗ ಅವು ನನ್ನ ಬಳಿಗೆ ಬರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಅವುಗಳನ್ನು ಕರೆಯಲು, ಅವು ಒಟ್ಟಾಗಿ ನಿಂತುಕೊಂಡವು. ಅಧ್ಯಾಯವನ್ನು ನೋಡಿ |