Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ರಕ್ಷಕನೂ ಇಸ್ರೇಲರ ಪರಿಶುದ್ಧನೂ ಆಗಿರುವ ಯೆಹೋವನು ಹೇಳುವುದೇನೆಂದರೆ, “ನಾನೇ ನಿಮ್ಮ ದೇವರಾದ ಯೆಹೋವನು. ಯಾವದು ಒಳ್ಳೆಯದೋ, ಪ್ರಯೋಜನಕರವೋ ಅದನ್ನು ಮಾಡಲು ನಿಮಗೆ ಕಲಿಸುತ್ತೇನೆ. ನೀವು ಹೋಗಲೇಬೇಕಾದ ದಾರಿಯಲ್ಲಿ ನಿಮ್ಮನ್ನು ನಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:17
32 ತಿಳಿವುಗಳ ಹೋಲಿಕೆ  

ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.


ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.


ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.


ನಿನ್ನ ಚಿತ್ತವನ್ನು ತಿಳಿಯಪಡಿಸಿ, ನನ್ನನ್ನು ನಡೆಸಿ ತರುವಾಯ ಮಹಿಮೆಗೆ ಸೇರಿಸಿಕೊಳ್ಳುವಿ.


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, ಆತನಂತಹ ಉಪದೇಶಕನು ಯಾರು?


‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.


ಹೊರಟುಬಂದ ಬಹು ದೇಶಗಳವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವವು.


ದೇವರೇ, ನೀನು ಬಾಲ್ಯದಿಂದಲೂ ನನ್ನನ್ನು ಉಪದೇಶಿಸುತ್ತಾ ಬಂದಿದ್ದಿ. ನಾನು ನಿನ್ನ ಅದ್ಭುತಕೃತ್ಯಗಳನ್ನು ಇಂದಿನ ವರೆಗೂ ಪ್ರಚುರಪಡಿಸುತ್ತಿದ್ದೇನೆ.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.


ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,


ಹೊರಟು ಬಂದ ಬಹು ಜನಾಂಗದವರು, “ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ, ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು. ನಾವು ಆತನ ದಾರಿಗಳಲ್ಲಿ ನಡೆಯುವೆವು” ಎಂದು ಹೇಳುವರು. ಏಕೆಂದರೆ ಚೀಯೋನಿನಿಂದ ಧರ್ಮೋಪದೇಶವೂ, ಯೆರೂಸಲೇಮಿನಿಂದ ಯೆಹೋವನ ವಾಕ್ಯವೂ ಹೊರಡುವುದು.


ಆತನಿಂದಲೇ ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು.


ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.


ಇವನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಇವನು ಯಾರಿಗೆ ಯೆಹೋವನ ಬೋಧನೆಯನ್ನು ತಿಳಿಸುತ್ತಾನೆ? ಮೊಲೆಬಿಟ್ಟ ಕೂಸುಗಳಿಗೋ ಅಥವಾ ತಾಯಿಯ ಬೆಚ್ಚನೆಯ ಎದೆಬಿಟ್ಟ ಮಕ್ಕಳಿಗೋ?


ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಆದರೂ ಇಸ್ರಾಯೇಲರ ಸದಮಲಸ್ವಾಮಿಯೂ, ಸೃಷ್ಟಿಕರ್ತನೂ ಆದ ಯೆಹೋವನ ಮಾತನ್ನು ಕೇಳಿರಿ, ‘ಭವಿಷ್ಯತ್ತಿನ ವಿಷಯವಾಗಿ ನನ್ನನ್ನು ವಿಚಾರಿಸಿರಿ. ನಾನೇ ನಿರ್ಮಿಸಿದ ನನ್ನ ಮಕ್ಕಳ ವಿಷಯದಲ್ಲಿ ನನಗೆ ಏನನ್ನು ವಿಧಿಸಿದರೂ ವಿಧಿಸಿರಿ.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.


ಆದರೆ ನಿಮಗೂ ಮಂಜೂಷಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರವಿರಬೇಕು; ಹತ್ತಿರ ಹೋಗಬಾರದು. ಹೀಗೆ ನೀವು ಹೋಗಬೇಕಾದ ಮಾರ್ಗವು ನಿಮಗೆ ಗೊತ್ತಾಗುವುದು; ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿರುವುದಿಲ್ಲ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು