Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ನನಗೆ ವಿಧೇಯರಾಗಿದ್ದರೆ, ತುಂಬಿಹರಿಯುವ ಹೊಳೆಯಂತೆ ಸಮಾಧಾನವು ನಿಮಗೆ ದೊರಕುತ್ತಿತ್ತು. ಸಮುದ್ರದ ತೆರೆಯಂತೆ ಮೇಲಿಂದ ಮೇಲೆ ನಿಮಗೆ ಒಳ್ಳೆಯವುಗಳು ಬರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ, ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:18
19 ತಿಳಿವುಗಳ ಹೋಲಿಕೆ  

ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ, ಸಂಪೂರ್ಣ ಸಮಾಧಾನವಿರುತ್ತದೆ, ಅಂಥವರಿಗೆ ವಿಘ್ನಕರವಾದದ್ದೇನೂ ಇರುವುದಿಲ್ಲ.


ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.


ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.


ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಅದರ ಬದಲಾಗಿ ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಹರಿಯಲಿ.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ


ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ, ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು