Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು. ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನ ಸಂತಾನವು ಸಹ ಮರಳಿನಂತೆಯೂ, ನಿನ್ನ ಮಕ್ಕಳು ಅಸಂಖ್ಯಾತ ಧಾನ್ಯಗಳಂತೆಯೂ ಇರುವರು. ಅವರ ಹೆಸರುಗಳು ನನ್ನ ಸಮ್ಮುಖದಿಂದ, ಅಳಿದುಹೋಗದೆ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:19
22 ತಿಳಿವುಗಳ ಹೋಲಿಕೆ  

ಇಸ್ರಾಯೇಲೇ, ನಿನ್ನ ಜನರು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಉಳಿದವರು ಮಾತ್ರ ತಿರುಗಿಕೊಳ್ಳುವರು. ನಾಶವಾಗುವುದಕ್ಕೆ ವಿಧಿಸಲ್ಪಟ್ಟದ್ದು, ನ್ಯಾಯನೀತಿಯಿಂದ ತುಂಬಿ ತುಳುಕುವುದು.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.


ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


“ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,


“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.


ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.


“ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆದಕಾರಣ ಯೆಹೋವನು ಇಸ್ರಾಯೇಲಿನಿಂದ ತಲೆ ಮತ್ತು ಬಾಲಗಳನ್ನು, ಖರ್ಜೂರದ ಕೊಂಬೆಗಳನ್ನು ಮತ್ತು ಬೇರುಗಳನ್ನು ಒಂದೇ ದಿನದಲ್ಲಿ ಕಡಿದು ಹಾಕುವನು.


ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.


ನೀನು ಜನಾಂಗಗಳನ್ನು ಹೆದರಿಸಿ ದುಷ್ಟರನ್ನು ನಾಶ ಮಾಡಿದ್ದಿ, ಅವರ ಹೆಸರನ್ನು ಯುಗಯುಗಾಂತರಕ್ಕೂ ಅಳಿಸಿಬಿಟ್ಟಿದ್ದಿ.


ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.


ಇದಲ್ಲದೆ ಹೊಲದ ಖಾತೆಯು ಸತ್ತುಹೋದ ಮಹ್ಲೋನನ ಹೆಸರಿನಲ್ಲೇ ಉಳಿದು, ಅವನ ಬಂಧುಗಳಲ್ಲಿಯೂ ಊರಲ್ಲಿಯೂ ಅವನ ಸಂತಾನವು ಉಳಿಯುವಂತೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿದ್ದೇನೆ ಇದಕ್ಕೆ ನೀವೇ ಸಾಕ್ಷಿಗಳು” ಎಂದು ಹೇಳಿದನು.


ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.


ನಿನ್ನ ಸಂತಾನವು ದೊಡ್ಡದ್ದೆಂದೂ, ನಿನ್ನ ಸಂತತಿಯವರು ಭೂಮಿಯ ಹುಲ್ಲಿನಂತೆ ಲೆಕ್ಕವಿಲ್ಲದವರು ಎಂದೂ ನಂಬಿರುವಿ.


ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.


ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.


ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.


ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು