Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೂ ನನ್ನ ಹೆಸರು ಕೆಡದಂತೆ ತಡೆಹಿಡಿವೆನು ನಿನ್ನ ಮೇಲಣ ಕೋಪವನು; ನನ್ನ ಕೀರ್ತಿಗೆ ಕಳಂಕ ಬಾರದಂತೆ ತಾಳಿಕೊಳ್ಳುವೆನು, ನಿರ್ಮೂಲಮಾಡದೆ ನಿನ್ನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು ನನ್ನ ಕೀರ್ತಿಗೆ ಕಳಂಕಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆದರೆ ನಾನು ತಾಳ್ಮೆಯಿಂದಿರುವೆನು. ನಾನು ಇದನ್ನು ನನ್ನ ಹೆಸರಿನ ನಿಮಿತ್ತ ಮಾಡುವೆನು. ನಾನು ನಿಮ್ಮ ಮೇಲೆ ಕೋಪಗೊಂಡು ನಾನು ನಾಶಮಾಡದೆ ಇದ್ದುದಕ್ಕಾಗಿ ಜನರು ನನ್ನನ್ನು ಸ್ತುತಿಸುವರು. ನನ್ನ ತಾಳ್ಮೆಗಾಗಿ ನೀವು ನನ್ನನ್ನು ಕೊಂಡಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನನ್ನ ಹೆಸರಿನ ನಿಮಿತ್ತ ನನ್ನ ಕೋಪವನ್ನು ತಡೆ ಮಾಡಿದೆನು. ನಾನು ನನ್ನ ಹೆಸರಿಗೆ ಕಳಂಕ ಬಾರದಂತೆ, ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:9
22 ತಿಳಿವುಗಳ ಹೋಲಿಕೆ  

ನನಗೋಸ್ಕರವಾಗಿಯೂ, ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಪಟ್ಟಣವನ್ನು ಉಳಿಸಿ ಕಾಪಾಡುವೆನು” ಎಂದು ಹೇಳುತ್ತಾನೆ ಎಂಬುದೇ.


ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.


ಆದರೂ ಆತನು ತನ್ನ ಹೆಸರಿನ ನಿಮಿತ್ತವಾಗಿಯೂ, ತನ್ನ ಶೌರ್ಯವನ್ನು ಪ್ರಕಟಿಸುವುದಕ್ಕಾಗಿಯೂ ಅವರನ್ನು ರಕ್ಷಿಸಿದನು.


ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.


ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.


ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ, ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ, ನನ್ನ ಹೆಸರಿನ ನಿಮಿತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು” ಇದು ಕರ್ತನಾದ ಯೆಹೋವನ ನುಡಿ.


“ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರು ಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.


‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.


‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.


ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.


ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.


ಯೆಹೋವನು ಹೀಗನ್ನುತ್ತಾನೆ, “ರಸ ದೊರೆಯಬಹುದಾದ ದ್ರಾಕ್ಷಿಯ ಗೊಂಚಲನ್ನು ಒಬ್ಬನು ನೋಡಿ, ‘ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ’ ಎನ್ನುವಂತೆ, ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು, ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು