ಯೆಶಾಯ 49:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಭೂಮ್ಯಾಕಾಶಗಳೇ, ಸಂತೋಷಪಡಿರಿ! ಪರ್ವತಗಳೇ, ಹರ್ಷಧ್ವನಿ ಮಾಡಿರಿ! ಯಾಕೆಂದರೆ ಯೆಹೋವನು ತನ್ನ ಜನರನ್ನು ಸಂತೈಸುತ್ತಾನೆ. ಆತನು ಬಡವರಿಗೆ ಕರುಣೆ ತೋರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು. ಅಧ್ಯಾಯವನ್ನು ನೋಡಿ |