Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’” ಎಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ನೀನು ಹೀಗೆಂದುಕೊಳ್ಳುವೆ ಮನದೊಳು : “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ನೀನು ನಿನ್ನ ಮನದೊಳಗೆ - ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು; ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ; ಇವರೆಲ್ಲಿದ್ದರು? ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ನೀನು ನಿನ್ನ ಮನಸ್ಸಿನೊಳಗೆ, ‘ಈ ಮಕ್ಕಳನ್ನೆಲ್ಲಾ ನನಗೆ ಯಾರು ಕೊಟ್ಟರು? ಇದು ಸಂತಸದ ಸಂಗತಿ! ನಾನು ಒಬ್ಬಂಟಿಗಳಾಗಿ ದುಃಖಿಸುತ್ತಿದ್ದೆನು. ನಾನು ಸೋಲಲ್ಪಟ್ಟವಳಾಗಿ ನನ್ನ ಜನರಿಂದ ದೂರವಿದ್ದೆನು. ಹೀಗಿರುವಾಗ ಈ ಮಕ್ಕಳನ್ನೆಲ್ಲಾ ಯಾರು ಕೊಟ್ಟರು? ನಾನು ಒಬ್ಬಂಟಿಗಳಾಗಿ ಇದ್ದೆನಲ್ಲಾ! ಇಷ್ಟೆಲ್ಲಾ ಮಕ್ಕಳನ್ನು ನನಗೆ ಕೊಟ್ಟವರು ಯಾರು?’” ಎಂದು ಅಂದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ‘ನನಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನು ದುಃಖಿತ ಮತ್ತು ಬಂಜೆಯಾಗಿದ್ದೆ; ನನ್ನನ್ನು ಗಡಿಪಾರು ಮಾಡಿ ತಿರಸ್ಕರಿಸಲಾಯಿತು. ಇವುಗಳನ್ನು ತಂದವರು ಯಾರು? ನಾನು ಒಬ್ಬಂಟಿಯಾಗಿ ಉಳಿದಿದ್ದೇನೆ, ಇವರನ್ನು ಸಾಕಿದವರು ಯಾರು? ಅವರೆಲ್ಲಿದ್ದರು?’ ” ಎಂದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:21
21 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.


ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.


ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು; ನೀನು “ನನ್ನ ಉಲ್ಲಾಸಿನಿ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು.


ನಿವಾಸಿಗಳು ತ್ಯಜಿಸಿದ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು, ನಿತ್ಯಶ್ರೇಷ್ಠತೆಯನ್ನು ದಯಪಾಲಿಸಿ ನಿನ್ನನ್ನು ತಲತಲಾಂತರದವರೆಗೆ ಉಲ್ಲಾಸಕರವಾಗುವಂತೆ ಮಾಡುವೆನು.


ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.


ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.


ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು.


ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ, ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು.


ಆಹಾ, ದ್ವೀಪನಿವಾಸಿಗಳೂ ನನ್ನನ್ನು ನಿರೀಕ್ಷಿಸುವವರಾಗಿದ್ದಾರೆ! ಮೇಘದೋಪಾದಿಯಲ್ಲಿ ಗೂಡುಗಳಿಗೆ ತ್ವರೆಪಡುವ ಪಾರಿವಾಳಗಳಂತೆ ಹಾರಿ ಬರುತ್ತಿರುವ ಇವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು