ಯೆಶಾಯ 49:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು. ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರೆದುತರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇಂತೆನ್ನುವರು ಸ್ವಾಮಿ ಸರ್ವೇಶ್ವರ : ಇದೋ, ಕೈಸನ್ನೆಮಾಡುವೆ ಜನಾಂಗಗಳಿಗೆ ನನ್ನ ಧ್ವಜವನ್ನೆತ್ತುವೆ ದೇಶಾಂತರಗಳವರೆಗೆ ಬರುವರವರು ನಿನ್ನ ಕುವರರನು ಅಪ್ಪಿಕೊಂಡು ಎದೆಗೆ ಕರೆತರುವರು ನಿನ್ನ ಕುವರಿಯರನು ಹೆಗಲಮೇಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳವರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು, ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರತರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಜನಾಂಗಗಳಿಗೆ ಕೈಬೀಸಿ ಸನ್ನೆ ಮಾಡುವೆನು. ಎಲ್ಲಾ ಜನರು ನೋಡುವಂತೆ ನಾನು ನನ್ನ ಧ್ವಜವನ್ನು ಎತ್ತುವೆನು. ಆಗ ಅವರು ನಿನ್ನ ಮಕ್ಕಳನ್ನು ನಿನಗೆ ತಂದೊಪ್ಪಿಸುವರು. ಅವರು ನಿನ್ನ ಮಕ್ಕಳನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ತರುವರು. ತಮ್ಮ ಕೈಗಳಲ್ಲಿ ಅವರನ್ನು ಎತ್ತಿಕೊಂಡು ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಸಾರ್ವಭೌಮ ಯೆಹೋವ ದೇವರು, ಇಂತೆನ್ನುತ್ತಾರೆ, “ಇಗೋ, ನಾನು ರಾಷ್ಟ್ರಗಳ ಕಡೆಗೆ ಕೈಯೆತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಪುತ್ರರನ್ನು ಕೈಹಿಡಿದು ತರುವರು. ನಿನ್ನ ಪುತ್ರಿಯರನ್ನು ಹೆಗಲ ಮೇಲೆ ತರುವರು. ಅಧ್ಯಾಯವನ್ನು ನೋಡಿ |