Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:23
45 ತಿಳಿವುಗಳ ಹೋಲಿಕೆ  

ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನಿನ್ನನ್ನು ಕುಗ್ಗಿಸಿದವರ ಸಂತಾನದವರು ನಿನ್ನ ಬಳಿಗೆ ತಗ್ಗಿಬಗ್ಗಿ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರೂ ನಿನ್ನ ಕಾಲಕೆಳಗೆ ಅಡ್ಡಬಿದ್ದು ನೀನು ಯೆಹೋವನ ಪಟ್ಟಣ, ಇಸ್ರಾಯೇಲಿನ ಸದಮಲಸ್ವಾಮಿಯ ಚೀಯೋನ್ ಎಂದು ಕೊಂಡಾಡುವರು.


ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.


ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು.


ಯೆಹೋವನ ಈ ಮಾತನ್ನು ಕೇಳಿರಿ, “ಐಗುಪ್ತದ ಆದಾಯವೂ, ಕೂಷಿನ ವ್ಯಾಪಾರವೂ, ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ಹೀಗೆ ಅರಿಕೆಮಾಡುವರು, ‘ದೇವರು ನಿಜವಾಗಿ ನಿಮ್ಮಲ್ಲಿದ್ದಾನೆ. ಇನ್ನು ಯಾವ ದೇವರೂ ಇಲ್ಲವೇ ಇಲ್ಲ.’”


“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.


ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”


ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.


ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ. ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವುದಿಲ್ಲ.


“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.


ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.


ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು.


ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ?


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.


ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.


ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.


ಸೇನಾಧೀಶ್ವರನೇ, ಯೆಹೋವನೇ, ನಿನ್ನನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿನ್ನ ದರ್ಶನವನ್ನು ಬಯಸುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.


ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.


ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಜನಾಂಗದವರು ಅವರನ್ನು ಕರೆದು ತಂದು ಸ್ವಸ್ಥಳಕ್ಕೆ ಸೇರಿಸುವರು; ಆಗ ಇಸ್ರಾಯೇಲಿನ ಮನೆತನದವರು ಯೆಹೋವನ ದೇಶದಲ್ಲಿ ಆ ಜನಾಂಗದವರನ್ನು ಗಂಡು ಹೆಣ್ಣಾಳುಗಳನ್ನಾಗಿ, ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು; ಯಾರಿಗೆ ಸೆರೆಯಾಗಿದ್ದರೋ ಅವರನ್ನು ಸೆರೆಹಿಡಿಯುವರು; ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರ ನಡೆಸುವರು.


ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.


ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.


ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು.


ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.


ಇಸ್ರಾಯೇಲಿಗೂ ಯೆಹೋವನಿಂದ ಶಾಶ್ವತ ರಕ್ಷಣೆ ದೊರೆಯುವುದು. ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವುದಿಲ್ಲ, ಮಾನಭಂಗಪಡುವುದಿಲ್ಲ.


ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ” ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು.


ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ತಂದು, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿರಿ.’”


ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.


ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು