ಯೆಶಾಯ 49:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಿನ್ನನ್ನು ಹಿಂಸಿಸುವವರು ತಮ್ಮ ದೇಹದ ಮಾಂಸವನ್ನೇ ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವಂತೆ ತಮ್ಮ ಸ್ವಂತ ರಕ್ತವನ್ನೇ ಕುಡಿಸಿ ಅಮಲೇರಿಸುವೆನು; ಆಗ ಯೆಹೋವನೇ ನಿನ್ನನ್ನು ರಕ್ಷಿಸಿದನೆಂದು ಜನರೆಲ್ಲರೂ ತಿಳಿದುಕೊಳ್ಳುವರು. ಯಾಕೋಬ್ಯರ ಸರ್ವಶಕ್ತನಾದ ದೇವರು ನಿಮ್ಮನ್ನು ರಕ್ಷಿಸಿದನೆಂದು ಎಲ್ಲರೂ ತಿಳಿಯುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿನ್ನ ಹಿಂಸಕರು ಸ್ವಮಾಂಸವನ್ನೇ ಭುಜಿಸುವಂತೆ ಅನುಮತಿಸುವೆನು. ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ಸ್ವರಕ್ತವನ್ನೇ ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬ್ಯರ ಶೂರನೂ ಎಂದು ನರಮಾನವರೆಲ್ಲರಿಗೂ ಗೊತ್ತಾಗುವುದು.” ಅಧ್ಯಾಯವನ್ನು ನೋಡಿ |