Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:6
30 ತಿಳಿವುಗಳ ಹೋಲಿಕೆ  

ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.


“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ. ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು.


ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


“ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.


ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.


ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.


ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.


ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


“ನನ್ನ ಜನರೇ, ಆಲಿಸಿರಿ! ನನ್ನ ಪ್ರಜೆಗಳೇ, ಕಿವಿಗೊಡಿರಿ! ಧರ್ಮೋಪದೇಶವು ನನ್ನಿಂದ ಹೊರಡುವುದು, ನನ್ನ ನ್ಯಾಯಬೋಧನೆಯನ್ನು ಜನಾಂಗಗಳಿಗೆ ಬೆಳಕನ್ನಾಗಿ ಸ್ಥಾಪಿಸುವೆನು.


ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


“ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ” ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು.


ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.


ಹೀಗೆ ಬಹು ದೇಶಗಳವರೂ, ಬಲವಾದ ಜನಾಂಗಗಳವರೂ ಯೆರೂಸಲೇಮಿನಲ್ಲಿ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ ಬರುವರು.”


ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.


ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, ‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’” ಎಂಬುದೇ.


ಹೀಗಿರಲು ಪ್ರಸವವೇದನೆ ಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲರೊಂದಿಗೆ ಹಿಂದಿರುಗುವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು