Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ, ಅನ್ಯಜನಾಂಗಕ್ಕೆ ಅಸಹ್ಯನೂ, ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆ ಹೇಳುತ್ತಾನೆ, “ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನನ್ನು ಪರಿಗ್ರಹಿಸಿರುವುದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:7
41 ತಿಳಿವುಗಳ ಹೋಲಿಕೆ  

ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,


ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಯರು ನಿನಗೆ ಸಾಕುತಾಯಿಯರು ಆಗುವರು. ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳನ್ನು ನೆಕ್ಕುವರು. ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡುವುದಿಲ್ಲ” ಎಂದು ನಿನಗೆ ಗೊತ್ತಾಗುವುದು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆ ತಪ್ಪಿತು; ಅವುಗಳಿಂದ ನನಗೆ ಬೇಸರವಾಯಿತು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.


ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.


ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.


ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.


ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು, ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ.


ಐಗುಪ್ತ ದೇಶದಿಂದ ರಾಯಭಾರಿಗಳು ಬರುವರು; ಕೂಷ್ ದೇಶದವರ ಕೈಗಳು ದೇವರಿಗೆ ಕಾಣಿಕೆಗಳನ್ನು ನೀಡಲಿಕ್ಕೆ ಅವಸರಪಡುವವು.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಮುಖ್ಯಯಾಜಕರೂ ಮತ್ತು ಕಾವಲುಗಾರರು ಆತನನ್ನು ಕಾಣುತ್ತಲೇ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಪಿಲಾತನು ಅವರಿಗೆ, “ಬೇಕಾದರೆ ನೀವೇ ಅವನನ್ನು ತೆಗೆದುಕೊಂಡು ಹೋಗಿ ಶಿಲುಬೆಗೆ ಹಾಕಿರಿ, ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ” ಎಂದನು.


ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.


ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.


ಯಾರು ದೊಡ್ಡವನು? ಊಟಕ್ಕೆ ಕುಳಿತವನೋ ಸೇವೆಮಾಡುವವನೋ? ಊಟಕ್ಕೆ ಕುಳಿತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ನನಗುಂಟಾದ ನಿಂದೆ, ಲಜ್ಜೆ, ಅಪಮಾನ ಇವು ನಿನಗೇ ಗೊತ್ತು; ನನ್ನ ವಿರೋಧಿಗಳು ನಿನಗೆ ಮರೆಯಾಗಿಲ್ಲವಲ್ಲಾ.


ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.


ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.


ಆದುದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ದೇವರೆಂದು ತಿಳಿದುಕೊಳ್ಳಬೇಕು. ಆತನು ನಂಬಿಗಸ್ತನಾದ ದೇವರು; ತನ್ನನ್ನು ಪ್ರೀತಿಸಿ ತನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ತಾನು ಮಾಡಿದ ವಾಗ್ದಾನವನ್ನೂ ಮತ್ತು ಕೃಪೆಯನ್ನೂ ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ನೆರವೇರಿಸುವವನಾಗಿಯೂ ಮತ್ತು


ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.


ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


ನಿನ್ನ ಹಿಂಸಕರು ತಮ್ಮ ಮಾಂಸವನ್ನೇ ತಿನ್ನುವಂತೆ ಮಾಡುವೆನು, ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು” ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವುದು.


ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು