ಯೆಶಾಯ 49:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಇದೇ ಯೆಹೋವನ ನುಡಿ - ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ, ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ; ನಾನು ನಿನ್ನನ್ನು ಕಾಪಾಡುತ್ತಾ [ನನ್ನ] ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇವಿುಸಿ ಬಂದಿಗಳಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ಹೇಳುವುದೇನೆಂದರೆ, “ನನ್ನ ದಯೆಯನ್ನು ತೋರಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನ್ನ ಪ್ರಾರ್ಥನೆಗೆ ಉತ್ತರ ಕೊಡುವೆನು. ನಿನ್ನನ್ನು ರಕ್ಷಿಸಲು ಒಂದು ವಿಶೇಷ ಸಮಯವಿದೆ. ಆಗ ನಾನು ನಿನಗೆ ಸಹಾಯ ಮಾಡುವೆನು, ನಿನ್ನನ್ನು ಕಾಪಾಡುವೆನು. ಜನರೊಂದಿಗೆ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ ಎಂಬುದಕ್ಕೆ ನೀನೇ ಸಾಕ್ಷಿಯಾಗಿರುವೆ. ದೇಶವು ಈಗ ನಾಶವಾಗಿದೆ, ಆದರೆ ಈ ಭೂಮಿಯು ಯಾರದಾಗಿತ್ತೋ ಅವರಿಗೆ ನೀನದನ್ನು ಹಿಂದಕ್ಕೆ ಕೊಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿ |