Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 49:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೊರಟುಹೋಗಿರಿ, ಕತ್ತಲಲ್ಲಿರುವವರಿಗೆ - ಬೆಳಕಿಗೆ ಹೊರಡಿರಿ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವಾಸ್ತ್ಯಗಳನ್ನು ಅವರಿಗೆ ಹಂಚಿ ದೇಶವನ್ನು ಜೀರ್ಣೋದ್ಧಾರಮಾಡುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಅದಕ್ಕೆ ಹುಲ್ಲುಗಾವಲಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೆರೆಮನೆಯಲ್ಲಿರುವವರಿಗೆ ನೀವು, ‘ಸೆರೆಮನೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಅಂಧಕಾರದಲ್ಲಿರುವವರಿಗೆ, ‘ಕತ್ತಲೆಯಿಂದ ಹೊರಗೆ ಬನ್ನಿರಿ’ ಎಂದು ಹೇಳುವಿರಿ. ಪ್ರಯಾಣದಲ್ಲಿರುವವರು ತಿನ್ನುತ್ತಾ ಹೋಗುವರು. ಬೋಳುಬೆಟ್ಟಗಳಲ್ಲೂ ನಿಮಗೆ ಆಹಾರ ದೊರೆಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’ ಕತ್ತಲೆಯಲ್ಲಿರುವವರಿಗೆ, ‘ಬೆಳಕಿಗೆ ಬನ್ನಿರಿ,’ ಎಂದು ಹೇಳಬಹುದು. “ಅವರು ದಾರಿಗಳಲ್ಲಿ ಮೇಯಿಸುವರು. ಅವರ ಎಲ್ಲಾ ಎತ್ತರವಾದ ಪ್ರದೇಶಗಳೂ ಕೂಡ ಅವರಿಗೆ ಹುಲ್ಲುಗಾವಲಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 49:9
37 ತಿಳಿವುಗಳ ಹೋಲಿಕೆ  

ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ.


ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,


ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ಸೆರೆಯವರ ಗೋಳಾಟವನ್ನು ಪರಿಗಣಿಸಿ, ಮರಣಪಾತ್ರರನ್ನು ಬಿಡಿಸಿ,


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವುದಿಲ್ಲ.


ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ಅದು ಕತ್ತಲಲ್ಲಿಯೂ, ಮರಣಾಂಧಕಾರದಲ್ಲಿಯೂ ವಾಸಿಸುತ್ತಿದ್ದ ನಮಗೆ ಬೆಳಕನ್ನು ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವುದು.”


ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.


“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.


ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.


ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.


ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.


ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ, “ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು.


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು