ಯೆಶಾಯ 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು : ಪ್ರಿಯತಮನಿಗೆ ಇತ್ತೊಂದು ದ್ರಾಕ್ಷಿಯ ತೋಟ ಫಲವತ್ತಾಗಿಹ ಗುಡ್ಡದ ಮೇಲಿನ ತೋಟ. ಆರಿಸಿ ಎಸೆದನು ಕಲ್ಲುಮುಳ್ಳುಗಳನು ಅಗೆದು ಹದಮಾಡಿದನಾತ ಗುಡ್ಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನನ್ನ ಪ್ರಿಯನನ್ನೂ ಅವನ ತೋಟವನ್ನೂ ಕುರಿತು ನನ್ನ ಪ್ರಿಯನ ಒಂದು ಗೀತವನ್ನು ನಾನು ಹಾಡುವೆ, ಕೇಳಿರಿ. ಸಾರವತ್ತಾದ ಗುಡ್ಡದ ಮೇಲೆ ನನ್ನ ಪ್ರಿಯನಿಗೆ ದ್ರಾಕ್ಷೆಯ ತೋಟವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನನ್ನ ಪ್ರಿಯನನ್ನೂ ಆತನ ತೋಟವನ್ನೂ ಕುರಿತು ಗೀತೆಯೊಂದನ್ನು ಹಾಡುವೆ. ಫಲವತ್ತಾದ ಪ್ರದೇಶದಲ್ಲಿ ನನ್ನ ಪ್ರಿಯನಿಗೆ ದ್ರಾಕ್ಷಿತೋಟವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನನ್ನ ಪ್ರಿಯನ ದ್ರಾಕ್ಷಿತೋಟದ ವಿಷಯವಾದ ಹಾಡನ್ನು ನನ್ನ ಪ್ರಾಣ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದ ಬಳಿಯಲ್ಲಿ ನನ್ನ ಅತಿ ಪ್ರಿಯನಿಗೆ ದ್ರಾಕ್ಷಿ ತೋಟವಿದೆ. ಅಧ್ಯಾಯವನ್ನು ನೋಡಿ |