Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು ಸಂಜೆಯಾದ ಮೇಲೆಯೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಪಾಡು ಏನು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಮುಂಜಾನೆ ಎದ್ದು ಮದ್ಯಕ್ಕಾಗಿ ಹುಡುಕಾಡುವಿರಿ. ಮಧ್ಯರಾತ್ರಿಯವರೆಗೆ ಎಚ್ಚರವಿದ್ದು ಕುಡಿದು ಮತ್ತರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳಗಿನ ಜಾವದಲ್ಲಿ ಎದ್ದು ರಾತ್ರಿವರೆಗೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲಕಳೆಯುವವರಿಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:11
21 ತಿಳಿವುಗಳ ಹೋಲಿಕೆ  

ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;


ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.


ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಅಯ್ಯೋ, ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟದ ಗತಿಯೇ! ದ್ರಾಕ್ಷಾರಸಕ್ಕೆ ಸೋತು ಹೋದವರ ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಬಾಡುತ್ತಿರುವ ಹೂವಿನ ಪಾಡೇ!


‘ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವನಿಗೆ ಕುಡಿಸಿ, ಅವನ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!


ಆಮೇಲೆ ಹಾವಿನಂತೆ ಕಚ್ಚುತ್ತದೆ, ಹೌದು, ನಾಗರ ಹಾವಿನ ಹಾಗೆ ಕಡಿಯುತ್ತದೆ.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು, ಕೆಟ್ಟದ್ದು ಇವುಗಳ ಭೇದವು ನನಗಿನ್ನು ತಿಳಿಯುವುದೋ? ನಿನ್ನ ಸೇವಕನಾದ ನನಗೆ ಅನ್ನಪಾನಗಳ ರುಚಿಯು ಗೊತ್ತಾಗುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ನಾನು ನನ್ನ ಒಡೆಯನಾದ ಅರಸನಿಗೆ ಯಾಕೆ ಹೊರೆಯಾಗಿರಬೇಕು?


ಆದರೆ ಇಗೋ, ಉಲ್ಲಾಸ, ಹರ್ಷ, ಕುರಿದನಗಳನ್ನು ಕಡಿಯುವುದು, ಮಾಂಸ ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ಇಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.


ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು.


ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.


“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು.


ಅಲ್ಲದೆ ಮದ್ಯಪಾನವು ಮೋಸಕರವಾದ ಕಾರಣ ದುಷ್ಟನನ್ನು ಮದವೇರಿಸುವುದು, ಸ್ವಸ್ಥಳದಲ್ಲಿ ನಿಲ್ಲಲು ಬಿಡುವುದಿಲ್ಲ; ಪಾತಾಳದಷ್ಟು ಅತಿ ಆಶೆಗೆ ಪ್ರೆರೇಪಿಸಿ ಮೃತ್ಯುವಿನಂತೆ ಅತೃಪ್ತನಾಗಿ ಜೀವಿಸುವನು. ಯೆಹೋವನ ಒಡಂಬಡಿಕೆಯ ವಿರುದ್ಧ ಜೀವಿಸುವವರನ್ನು ತನ್ನ ಕಡೆಗೆ ಆಕರ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು