ಯೆಶಾಯ 5:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಯ್ಯೋ, ಕೆಟ್ಟದ್ದನ್ನು ಒಳ್ಳೇದೆಂದೂ ಒಳ್ಳೇದನ್ನು ಕೆಟ್ಟದ್ದೆಂದೂ ಬೋಧಿಸಿ ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸಿ ಕಹಿಯು ಸಿಹಿ, ಸಿಹಿಯು ಕಹಿ ಎಂದು ಸ್ಥಾಪಿಸುವವರ ಗತಿಯನ್ನು ಏನೆಂದು ಹೇಳಲಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಜನರು ಒಳ್ಳೆಯವುಗಳನ್ನು ಕೆಟ್ಟವುಗಳೆಂದೂ ಕೆಟ್ಟವುಗಳನ್ನು ಒಳ್ಳೆಯವುಗಳೆಂದೂ ಹೇಳುತ್ತಾರೆ. ಅವರು ಬೆಳಕನ್ನು ಕತ್ತಲೆಯೆಂದೂ ಕತ್ತಲೆಯನ್ನು ಬೆಳಕೆಂದೂ ಅನ್ನುತ್ತಾರೆ. ಅವರು ಸಿಹಿಯನ್ನು ಕಹಿಯೆಂದೂ ಕಹಿಯನ್ನು ಸಿಹಿಯೆಂದೂ ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ! ಅಧ್ಯಾಯವನ್ನು ನೋಡಿ |