Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸಿಂಹದಂತೆ ಗರ್ಜಿಸುತ್ತಾರೆ, ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ, ಗುರುಗುಟ್ಟುತ್ತಾ ಬೇಟೆಹಿಡಿದು ಹೊತ್ತುಕೊಂಡು ಹೋಗುತ್ತಾರೆ, ರಕ್ಷಿಸುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಶತ್ರುಗಳು ಆರ್ಭಟಿಸುವರು, ಆ ಆರ್ಭಟವು ಪ್ರಾಯದ ಸಿಂಹಗಳ ಗರ್ಜನೆಯಂತಿರುವುದು. ಶತ್ರುಗಳು ಹೂಂಕರಿಸುತ್ತಾ ತಮ್ಮೊಂದಿಗೆ ಯುದ್ಧ ಮಾಡುತ್ತಿರುವವರನ್ನು ಹಿಡಿದುಬಿಡುವರು. ಜನರು ಹೋರಾಡಿ ಪಾರಾಗಲು ಪ್ರಯತ್ನಿಸುವರು. ಆದರೆ ಅವರನ್ನು ರಕ್ಷಿಸುವವರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅವರ ಗರ್ಜನೆಯು ಸಿಂಹ ಆರ್ಭಟಿಸಿದಂತಿದೆ. ಪ್ರಾಯದ ಸಿಂಹ ಆರ್ಭಟಿಸಿದಂತಿದೆ. ಹೌದು, ಗರ್ಜಿಸುತ್ತಾ ಬೇಟೆಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ, ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:29
20 ತಿಳಿವುಗಳ ಹೋಲಿಕೆ  

ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟ ಅಡವಿಯು ಹಾಳಾಗಿದೆ.


ಇದಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು, ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳ, ಬಹು ಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವರು.


ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ.


ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.


ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;


ಆ ದೇಶದವರು ಪ್ರಾಯದ ಸಿಂಹಗಳಂತೆ ಒಟ್ಟಿಗೆ ಗರ್ಜಿಸುತ್ತಿದ್ದಾರೆ, ಸಿಂಹದ ಮರಿಗಳ ಹಾಗೆ ಗುರುಗುಟ್ಟುತ್ತಿದ್ದಾರೆ.


ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.


ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.


ಯೆಹೂದನು ಪ್ರಾಯದ ಸಿಂಹದಂತಿದ್ದಾನೆ. ನನ್ನ ಪುತ್ರನೇ, ನೀನು ಮೃಗವನ್ನು ಹಿಡಿದು ಕೊಂದು ಬೆಟ್ಟವನ್ನು ಸೇರಿದ ಸಿಂಹದೋಪಾದಿಯಲ್ಲಿದ್ದೀ. ಅವನು ಸಿಂಹದಂತೆ ಕಾಲು ಮುದುರಿ ಹೊಂಚುಹಾಕಿಕೊಂಡಿದ್ದಾನೆ. ಮೃಗ ರಾಜನಿಗೆ ಸಮನಾದ ಇವನನ್ನು ಕೆಣಕುವುದು ಯಾರಿಂದಾದೀತು?


ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು. ನಿನ್ನ ಬಾಲ್ಯದಿಂದ ನಿನ್ನಲ್ಲಿ ವ್ಯಾಪಾರ ಮಾಡಿದವರೆಲ್ಲರೂ; ಚದರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರುವುದಿಲ್ಲ.


ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?


ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು