Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರ ಮೇಲೆ ಗುರುಗುಟ್ಟುವರು; ದೇಶದಲ್ಲಿಯೋ, ಆಹಾ, ಅಂಧಕಾರವೂ ವ್ಯಾಕುಲವೂ ತುಂಬಿರುವವು, ಮೋಡ ಕವಿದು ಬೆಳಕು ಕತ್ತಲಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಸಮುದ್ರವು ಭೋರ್ಗರೆಯವಂತೆ ಆ ದಿನದಲ್ಲಿ ಗರ್ಜನೆಯಿರುವುದು. ಸೆರೆಹಿಡಿಯಲ್ಪಟ್ಟ ಜನರು ನೆಲದ ಕಡೆ ನೋಡುವರು. ಅಲ್ಲಿ ಬರೇ ಕತ್ತಲೆಯೇ. ಆ ದಟ್ಟವಾದ ಮೋಡಗಳಲ್ಲಿ ಎಲ್ಲವೂ ಕಪ್ಪಾಗಿಯೇ ಕಾಣುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:30
24 ತಿಳಿವುಗಳ ಹೋಲಿಕೆ  

ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.


ಅವುಗಳ ಆಗಮನದಿಂದ ಭೂಮಿಯು ಕಂಪಿಸುತ್ತದೆ, ಆಕಾಶಮಂಡಲವು ನಡಗುತ್ತದೆ, ಸೂರ್ಯ ಮತ್ತು ಚಂದ್ರರು ಮಂಕಾಗುತ್ತಾರೆ, ಮತ್ತು ನಕ್ಷತ್ರಗಳು ಕಾಂತಿಗುಂದುತ್ತವೆ.


ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.


“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.


ಆಕಾಶದ ತಾರೆಗಳೂ, ನಕ್ಷತ್ರ ರಾಶಿಗಳೂ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ಪ್ರಕಾಶಿಸುವುದಿಲ್ಲ.


ಆ ದಿನದಲ್ಲಿ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂಮಿಯನ್ನು ಹಗಲಿನಲ್ಲೇ ಕತ್ತಲು ಮಾಡುವೆನು.


ಆತನೇ ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ.


ಬಿಲ್ಲನ್ನೂ ಮತ್ತು ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಮೊರೆಯುತ್ತದೆ, ಕುದುರೆ ಹತ್ತಿದ್ದಾರೆ; ಬಾಬೆಲ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.


ಆಹಾ, ಬಹುಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ! ಇಗೋ, ಜನಾಂಗಗಳ ಆರ್ಭಟವು ಒಟ್ಟಿಗೆ ಕೂಡಿಕೊಂಡ ಅನೇಕ ರಾಜ್ಯಗಳ ಆರ್ಭಟದಂತೆ ಇದೆ! ಯೆಹೋವನು ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡುತ್ತಾನೆ.


ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ.


ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು. ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು.


“ಯೆಹೋವನು ಇಂತೆನ್ನುತ್ತಾನೆ, ಭೀತಿಯಿಂದಾಗುವ ಶಬ್ದವು ಕೇಳಿಸಿದೆ; ಭಯವೇ ಹೊರತು ಸಮಾಧಾನವಿಲ್ಲ;


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಯೆಹೋವನ ದಿನವನ್ನು ನಿರೀಕ್ಷಿಸಿಕೊಂಡವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನ ದಿನವು ನಿಮಗೇಕೆ? ಅದು ಬೆಳಕಲ್ಲ ಕತ್ತಲೆಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು