ಯೆಶಾಯ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನ ಒಂದು ಮಾತು ಬಿದ್ದಿತು, ನೋಡಿರಿ - ಸೊಗಸಾದ ಅನೇಕ ದೊಡ್ಡ ಮನೆಗಳು ವಾಸಿಸುವವರೇ ಇಲ್ಲದೆ ಖಂಡಿತವಾಗಿ ಹಾಳಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸರ್ವಶಕ್ತನಾದ ಯೆಹೋವನ ನುಡಿಗಳಿವು. ನಾನು ಈ ಮಾತುಗಳನ್ನು ಕಿವಿಯಾರೆ ಕೇಳಿದೆನು: “ಈಗ ಅನೇಕ ಮನೆಗಳಿವೆ, ಆದರೆ ನಾನು ಖಂಡಿತವಾಗಿ ಹೇಳುವುದೇನೆಂದರೆ ಎಲ್ಲಾ ಮನೆಗಳು ಕೆಡವಲ್ಪಡುವವು. ಈಗ ಭವ್ಯವಾದ ಬಂಗಲೆಗಳಿವೆ, ಆದರೆ ಅವುಗಳೆಲ್ಲಾ ಬರಿದಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು. ಅಧ್ಯಾಯವನ್ನು ನೋಡಿ |