Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:1
27 ತಿಳಿವುಗಳ ಹೋಲಿಕೆ  

ಅವರ ಆಶ್ರಯದುರ್ಗವಾದ ಯೆಹೋವನು ಅವರನ್ನು ಶತ್ರಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಜನರು ಹೇಗೆ ಸೋತುಹೋಗುತ್ತಿದ್ದರು? ಯೆಹೋವನು ಅವರನ್ನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತು ಸಾವಿರ ಜನರು ಹೇಗೆ ಓಡಿಹೋಗುತ್ತಿದ್ದರು?


ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.


ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.


ಆದರೂ ನಮ್ಮ ಸಹೋದರರ ಕುಲವೂ ನಮ್ಮ ಕುಲವೂ, ಅವರ ಮಕ್ಕಳೂ, ನಮ್ಮ ಮಕ್ಕಳೂ ಒಂದೇ ಆಗಿದ್ದೇವೆ. ಆದರೆ ನಾವು ನಮ್ಮ ಗಂಡು ಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು. ನಮ್ಮ ಹೆಣ್ಣು ಮಕ್ಕಳಲ್ಲಿ ಕೆಲವರನ್ನು ಅಪಹರಿಸಿದ್ದಾರೆ. ನಮ್ಮ ಪ್ರಯತ್ನವೆಲ್ಲ ವ್ಯರ್ಥವಾಯಿತು. ನಮ್ಮ ಹೊಲ ದ್ರಾಕ್ಷಿತೋಟಗಳು ಪರರಿಗೆ ಅಧೀನವಾದವು ಎಂದು ಗೊಣಗಾಡಿದರು.


ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.


ಯೆಹೋವನ ಈ ಮಾತನ್ನು ಕೇಳಿರಿ, “ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆಮಾಡುವೆನು.”


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ, ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?


ನೀನು ಯಾವ ಲಾಭವನ್ನೂ ಹೊಂದದೆ ನಿಷ್ಪ್ರಯೋಜನವಾಗಿ, ನಿನ್ನ ಪ್ರಜೆಯನ್ನು ಮಾರಿಬಿಟ್ಟಿದ್ದೀ.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.


ಜನರು ನಮ್ಮನ್ನು ಕೊಂದು ಸಂಹರಿಸಿ, ನಮ್ಮನ್ನು ನಿರ್ನಾಮಗೊಳಿಸುವ ಹಾಗೆ ನಾವು ಮಾರಲ್ಪಟ್ಟೆವು. ನಾವು ಸೇವಕ ಸೇವಕಿಯರಾಗುವುದಕ್ಕೆ ಗುಲಾಮರಂತೆ ಮಾರಲ್ಪಟ್ಟಿದ್ದರೆ ಆ ಕಷ್ಟದ ವಿಷಯದಲ್ಲಿ ರಾಜನನ್ನು ತೊಂದರೆಪಡಿಸುವುದು ಯೋಗ್ಯವಲ್ಲವೆಂದು ಸುಮ್ಮನಿರುತ್ತಿದ್ದೆನು” ಎಂದು ಉತ್ತರಕೊಟ್ಟಳು.


ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.


“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.


ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.


ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ.


ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.


“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!


ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.


“ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.


ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಆಹಾ, ಯಾಜಕರೇ, ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು