Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 50:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂತೆ ಜೀರ್ಣವಾಗುವರು; ಅವರನ್ನು ನುಸಿಯು ತಿಂದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನನ್ನ ಒಡೆಯನು ಸಹಾಯ ಮಾಡುತ್ತಾನೆ. ಯಾರೂ ನನ್ನ ಮೇಲೆ ದೋಷಾರೋಪಣೆ ಹೊರಿಸಲಾಗದು. ಈ ಜನರೆಲ್ಲರೂ ಬೆಲೆಯಿಲ್ಲದ ಹಳೆಯ ಬಟ್ಟೆಯಂತಾಗುವರು, ನುಸಿಯು ಅವುಗಳನ್ನು ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 50:9
10 ತಿಳಿವುಗಳ ಹೋಲಿಕೆ  

ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಅವು ನಾಶವಾಗುವವು; ಆದರೆ ನೀನು ಶಾಶ್ವತವಾಗಿರುತ್ತಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು. ಉಡುಪಿನಂತೆ ಅವುಗಳನ್ನು ಬದಲಿಸುತ್ತಿ; ಅವು ಮಾರ್ಪಡುವವು.


ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ


ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.


ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು