Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೆರೆಯಲ್ಲಿ ಸೊರಗಿದವನು ಸಾಯನು; ಇಳಿಯನವನು ಪಾತಾಳಕ್ಕೆ, ಬಿಡುಗಡೆಯಾಗುವನು ಬೇಗನೆ, ಇರದವನಿಗೆ ಅನ್ನದ ಕೊರತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 [ಸೆರೆಯಲ್ಲಿ] ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು; ಅವನಿಗೆ ಅನ್ನದ ಕೊರತೆಯೇ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸೆರೆಯಲ್ಲಿರುವವರು ಬೇಗನೆ ಬಿಡುಗಡೆ ಹೊಂದುವರು. ಅವರು ಸೆರೆಮನೆಯಲ್ಲಿ ಸತ್ತು ಕೊಳೆಯುವುದಿಲ್ಲ. ಅವರಿಗೆ ತಿನ್ನಲು ಬೇಕಾದಷ್ಟು ಊಟವಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸೆರೆಯಲ್ಲಿ ಕುಗ್ಗಿರುವವನು ತಾನು ಸಾಯದಂತೆಯೂ, ತನಗೆ ಆಹಾರದ ಕೊರತೆ ಇರದಂತೆಯೂ, ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:14
12 ತಿಳಿವುಗಳ ಹೋಲಿಕೆ  

ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.


ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!


ಅವರಿಗೆ ಹಸಿವೆ ಬಾಯಾರಿಕೆಗಳು ಆಗುವುದಿಲ್ಲ, ಝಳವೂ ಬಿಸಿಲೂ ಬಡಿಯುವುದಿಲ್ಲ. ಅವರನ್ನು ಕರುಣಿಸುವಾತನು ದಾರಿತೋರಿಸುತ್ತಾ ನೀರು ಸಿಕ್ಕುವ ಒರತೆಗಳ ಬಳಿಯಲ್ಲಿ ನಡೆಸುವನು.


ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರ ಪ್ರಧಾನರಲ್ಲಿಯೂ, ಯಾಜಕರಲ್ಲಿಯೂ ಮತ್ತು ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇಮಿನಲ್ಲಿ ಯೆಹೋವನಿಗೋಸ್ಕರ ಆಲಯವನ್ನು ಕಟ್ಟುವುದಕ್ಕಾಗಿ ಹೊರಟುಹೋದರು.


ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.


ಜ್ಞಾನವೂ, ತಿಳಿವಳಿಕೆಯೂ, ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ ನಿಧಿಯಾಗುವುದು.


ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.


ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು