Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚತ್ತುಕೋ, ಎಚ್ಚತ್ತುಕೋ, ಎದ್ದು ನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದು ಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜೆರುಸಲೇಮೇ, ಎಚ್ಚರಗೊಳ್ಳು; ಎದ್ದೇಳು; ಯೆಹೋವನು ನಿನ್ನ ಮೇಲೆ ಬಹಳವಾಗಿ ಕೋಪಗೊಂಡು ನಿನ್ನನ್ನು ಶಿಕ್ಷಿಸಿದ್ದಾನೆ. ಆ ಶಿಕ್ಷೆಯು ವಿಷತುಂಬಿದ ಪಾತ್ರೆಯಂತಿದೆ. ನೀನು ಅದನ್ನು ಕುಡಿಯಲೇಬೇಕಿತ್ತು. ಈಗ ನೀನು ಅದನ್ನು ಕುಡಿದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:17
30 ತಿಳಿವುಗಳ ಹೋಲಿಕೆ  

ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


“ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.


ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.


ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.


ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.


ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”


ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.


‘ಎಚ್ಚರವಾಗು, ದೆಬೋರಳೇ! ಎಚ್ಚರವಾಗು, ಎಚ್ಚರವಾಗು, ಎಚ್ಚರವಾಗಿ ಗಾನಮಾಡು. ಬಾರಾಕನೇ, ಏಳು; ಅಬೀನೋವಮನ ಮಗನೇ, ನೀನು ಸೆರೆಹಿಡಿದವರನ್ನು ಸಾಗಿಸಿಕೊಂಡು ಹೋಗು.’


ನಿಮ್ಮ ಮುಂದೆ ನಡೆಯುವ ಸಂಗತಿಗಳ ದೆಸೆಯಿಂದ ಹುಚ್ಚರಾಗಿ ಹೋಗುವಿರಿ.


ಚಿತ್ತಭ್ರಮಣೆ, ಕುರುಡುತನ, ಮನೋವಿಸ್ಮಯ ಇವುಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.


ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.


ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು.


ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.


ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.


ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,


ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.


ಆದಕಾರಣ ನನ್ನ ಉಗ್ರರೋಷಾಗ್ನಿಯು ಸುರಿದು ಯೆಹೂದದ ಊರುಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಧಗಧಗಿಸಿತು; ಅವು ಈಗಲೂ ಹಾಳು ಪಾಳಾಗಿವೆ.


ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.


ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು