Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮ ಮಾತೆಯಾದ ಸಾರಳನ್ನೂ ದೃಷ್ಟಿಸಿರಿ; ನಾನು ಕರೆದಾಗ ಅಬ್ರಹಾಮನು ಒಬ್ಬಂಟಿಗನಾಗಿದ್ದನು. ನಾನು ಅವನನ್ನು ಆಶೀರ್ವದಿಸಿ, ಅವನ ಸಂತಾನವನ್ನು ಅಭಿವೃದ್ಧಿಪಡಿಸಿ, ಅವನನ್ನು ಮಹಾಜನಾಂಗದ ಮೂಲಪುರುಷನನ್ನಾಗಿ ಮಾಡಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:2
23 ತಿಳಿವುಗಳ ಹೋಲಿಕೆ  

“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.


ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ, “ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ.


ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ, ಬೆಳ್ಳಿ ಬಂಗಾರವನ್ನೂ, ದಾಸದಾಸಿಯರನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಟ್ಟಿದ್ದರಿಂದ ಅವನು ಧನವಂತನಾದನು.


ಅಬ್ರಹಾಮನು ದಿನ ತುಂಬಿದ ವೃದ್ಧನಾಗಿದ್ದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಧಿಕ ಸಂಖ್ಯೆಯಲ್ಲಿ ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿದ್ದೀರಿ.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.


ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ಆಗ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಅವರು ಮಹಾಬಲಿಷ್ಠ ಜನಾಂಗವಾದರು.


ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು