Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿನ್ನ ಕರ್ತನೂ ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೇಹೋವನು ಹೀಗನ್ನುತ್ತಾನೆ - ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ ನನ್ನ ರೋಷವು ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು; ಅದನ್ನು ನೀನು ಇನ್ನು ಕುಡಿಯೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿನ್ನ ದೇವರೂ ಒಡೆಯನೂ ಆಗಿರುವ ಯೆಹೋವನು ತನ್ನ ಜನರಿಗಾಗಿ ಯುದ್ಧ ಮಾಡುವನು. ಅವನು ನಿನಗೆ ಹೇಳುವುದೇನೆಂದರೆ, “ಇಗೋ, ನಾನು ನಿನ್ನಿಂದ ವಿಷದ ಪಾತ್ರೆಯನ್ನು (ಶಿಕ್ಷೆ) ತೆಗೆದುಬಿಡುತ್ತೇನೆ. ಇನ್ನು ಮುಂದೆ ನನ್ನ ಸಿಟ್ಟಿನಿಂದ ನೀನು ಶಿಕ್ಷಿಸಲ್ಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:22
22 ತಿಳಿವುಗಳ ಹೋಲಿಕೆ  

ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.


ಅವರ ರಕ್ಷಕನು ಬಲಿಷ್ಠನು; ಸೇನಾಧೀಶ್ವರನಾದ ಯೆಹೋವನೆಂಬುದೇ ಆತನ ನಾಮಧೇಯ; ಆತನು ಅವರ ವ್ಯಾಜ್ಯವನ್ನು ಜಯಿಸಿ, ಲೋಕವನ್ನು ವಿಶ್ರಾಂತಿಗೊಳಿಸಿ ಬಾಬೆಲಿನವರನ್ನು ಕಳವಳಪಡಿಸುವನು.”


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ಯೆಹೋವನೇ, ನನ್ನ ಸಂಗಡ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯಮಾಡು; ನನ್ನ ಮೇಲೆ ಯುದ್ಧ ಮಾಡುವವರ ಸಂಗಡ ಯುದ್ಧ ಮಾಡು.


ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.


ನಾನು ಸಕಲ ಜನಾಂಗಗಳನ್ನು ಕೂಡಿಸುವೆನು, ಮತ್ತು ಯೆಹೋಷಾಫಾಟನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡುವೆನು. ಅಲ್ಲಿ ನನ್ನ ಜನರಿಗೆ ನ್ಯಾಯತೀರ್ಪನ್ನು ಕೊಡುವೆನು. ಏಕೆಂದರೆ ನನ್ನ ಜನರು ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರೊಂದಿಗೆ ವ್ಯಾಜ್ಯ ಮಾಡುವೆನು. ಅವರು ನನ್ನ ಜನರನ್ನು ದೇಶದೇಶಗಳಿಗೆ ಚದುರಿಸಿ ನನ್ನ ದೇಶವನ್ನು ಹಂಚಿಕೊಂಡರು.


ನಾಬಾಲನು ಸತ್ತನೆಂಬ ವರ್ತಮಾನವು ದಾವೀದನು ಕೇಳಿ, “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂತ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ” ಎಂದು ಹೇಳಿದನು. ಅನಂತರ ಅವನು ಅಬೀಗೈಲಳನ್ನು ತನಗೆ ಹೆಂಡತಿಯಾಗಿರಬೇಕೆಂದು ದೂತರ ಮೂಲಕ ಹೇಳಿ ಕಳುಹಿಸಿದನು.


ಇನ್ನೆಂದಿಗೂ ನಾನು ನನ್ನ ಮುಖವನ್ನು ಮರೆಮಾಡುವುದಿಲ್ಲ. ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.


ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.


ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


ನನ್ನ ಜನರೇ, ನೀವು ನನ್ನ ಪವಿತ್ರಪರ್ವತದಲ್ಲಿ ನನ್ನ ದಂಡನೆಯ ಕಹಿ ಪಾನಮಾಡಿದ್ದಿರಿ. ನಿಮ್ಮ ಸುತ್ತಲಿರುವ ಸಕಲ ಜನಾಂಗಗಳೂ ಹೀಗೆ ನಿತ್ಯವಾಗಿ ಪಾನಮಾಡುವವು. ಹೌದು ಆ ರಾಜ್ಯಗಳು ಹೀಗೆ ಕುಡಿದು ಕಬಳಿಸಿ ಅಸ್ತಿತ್ವದಲ್ಲಿ ಇಲ್ಲದಂತೆ ಆಗುವವು.


“ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.


ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.


ಆತನು ನನಗೆ ಕಹಿಯಾದ ಆಹಾರವನ್ನು ಕೊಟ್ಟು, ವಿಷ ಪಾನವನ್ನು ಕುಡಿಯಮಾಡಿದ್ದಾನೆ.


ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು