Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 51:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದೇ ರೀತಿಯಲ್ಲಿ ಯೆಹೋವನು ಚೀಯೋನನ್ನು ಮತ್ತು ನಿರ್ಜನವಾದ ಅದರ ಸ್ಥಳಗಳನ್ನು ಆದರಿಸುವನು; ಅವರಿಗಾಗಿ ಮಹಾದೊಡ್ಡ ಕಾರ್ಯವನ್ನು ಮಾಡುವನು. ಯೆಹೋವನು ಮರುಭೂಮಿಯನ್ನು ಏದೆನ್ ಉದ್ಯಾನವನದಂತೆ ಮಾಡುವನು. ಆ ದೇಶವು ಬರಿದಾಗಿತ್ತು. ಆದರೆ ಅದು ಯೆಹೋವನ ಉದ್ಯಾನವನವಾಗುವದು. ಅದರೊಳಗಿರುವ ಜನರು ಸಂತೋಷಭರಿತರಾಗುವರು. ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವರು. ಅವರು ಕೃತಜ್ಞತಾಸ್ತುತಿ ಮಾಡುವರು, ಜಯಗೀತೆಯನ್ನು ಹಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 51:3
36 ತಿಳಿವುಗಳ ಹೋಲಿಕೆ  

ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.


ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.


ನಾನು ಬಳಲಿದವರನ್ನು ತಂಪುಗೊಳಿಸಿ, ಕುಂದಿದವರೆಲ್ಲರನ್ನೂ ತೃಪ್ತಿಪಡಿಸುವೆನಷ್ಟೆ” ಎಂಬುದೇ.


ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ


ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.


ಇದೇ ಯೆಹೋವನ ನುಡಿ, “ಈ ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ಈ ರಕ್ಷಣೆಯ ದಿನದಲ್ಲಿ ನಿನಗೆ ಸಹಾಯಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡುತ್ತಾ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿ ನೇಮಿಸಿದ್ದೇನೆ.


ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ.


ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.


ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ. ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.


ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು