ಯೆಶಾಯ 51:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು, ಹುಳವು ಅವರನ್ನು ಉಣ್ಣೆಯಂತೆ ತಿಂದುಬಿಡುವುದು. ನನ್ನ ರಕ್ಷಣಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವುದು. ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಾಕೆಂದರೆ ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು. ಅವರು ಉಣ್ಣೆಯಂತಿರುವರು, ನುಸಿಯು ಅದನ್ನು ತಿಂದುಬಿಡುವುದು. ಆದರೆ ನನ್ನ ಒಳ್ಳೆಯತನವು ಶಾಶ್ವತವಾದದ್ದು. ನನ್ನ ರಕ್ಷಣೆಯು ಸದಾಕಾಲವಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.