Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:1
40 ತಿಳಿವುಗಳ ಹೋಲಿಕೆ  

ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.


ಯೆಹೋವನ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಂಡು, ಬಲವನ್ನು ತಂದುಕೋ! ಪೂರ್ವಕಾಲದಲ್ಲಿ, ತಲಾಂತರಗಳಲ್ಲಿ, ಎಚ್ಚರಗೊಂಡಂತೆ ಈಗಲೂ ಎಚ್ಚೆತ್ತುಕೋ, ರಹಬನ್ನು ಛೇದಿಸಿ ಘಟಸರ್ಪವನ್ನು ತಿವಿದುಬಿಟ್ಟವನು ನೀನಲ್ಲವೋ?


ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.


ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು, ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ


ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.


ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ, ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ಬಾಗಿಲುಗಳನ್ನು ತೆರೆಯಿರಿ! ಧರ್ಮಸತ್ಯಗಳನ್ನು ಕೈಗೊಳ್ಳುವ ಜನಾಂಗವು ಒಳಗೆ ಪ್ರವೇಶಿಸಲಿ!


ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.


ಇಸ್ರಾಯೇಲರ ಪ್ರಮುಖರು ಮಾತ್ರ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತು ಜನರಲ್ಲಿ ಒಂಭತ್ತು ಜನ ತಮ್ಮ ತಮ್ಮ ಊರುಗಳಲ್ಲಿ ವಾಸಮಾಡುತ್ತಿದ್ದರು, ಒಬ್ಬನು ಮಾತ್ರ ಪವಿತ್ರನಗರವಾಗಿರುವ ಯೆರೂಸಲೇಮಿನಲ್ಲಿ ವಾಸಮಾಡಬೇಕು ಎಂದು ಚೀಟು ಹಾಕಿ ಅವನನ್ನು ಗೊತ್ತು ಮಾಡುತ್ತಿದ್ದರು.


ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.


ನಿನ್ನ ಅಣ್ಣನಾದ ಆರೋನನಿಗೆ ಗೌರವವೂ, ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು (ಪರಿಶುದ್ಧವಸ್ತುಗಳು) ಮಾಡಿಸಬೇಕು.


ಪರಲೋಕದಲ್ಲಿರುವ ಸೈನ್ಯವು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಹತ್ತಿದವರಾಗಿ ಆತನನ್ನು ಹಿಂಬಾಲಿಸಿದರು.


ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,


ಯೆಹೋವನು ಇಂತೆನ್ನುತ್ತಾನೆ, ‘ಜೆರುಬ್ಬಾಬೆಲನೇ ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ’ ಇದು ಯೆಹೋವನ ನುಡಿ; ‘ನಾನು ನಿಮ್ಮೊಂದಿಗೆ ಇದ್ದೇನೆ’ ಎಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಸ್ರಾಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನನಾದ ಯಾರೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಬಾರದು.


ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಆದರೂ ಅವನು ಮಾತನಾಡುವ ಶಬ್ದವನ್ನು ಕೇಳಿದೆನು; ಅವನ ಮಾತಿನ ಶಬ್ದವು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಬೋರಲು ಬಿದ್ದಿದ್ದೆನು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.


ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ. ಕಾಣಿಕೆ ಸಹಿತ ಆತನ ಸನ್ನಿಧಿಗೆ ಬನ್ನಿರಿ. ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ.


ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವ ಹಾಗೆ ನೀನು ಇವರನ್ನು ನಿನ್ನ ಎದೆಗೆ ಒರಗಿ ಕಟ್ಟಿಕೊಳ್ಳುವಿ.


ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.


ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು