Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವದನ್ನೂ ಮುಟ್ಟದಿರಿ, ಅದರ ಮಧ್ಯದೊಳಗಿಂದ ತೆರಳಿರಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; ಅಶುದ್ಧವಾದ ಯಾವುದನ್ನೂ ಮುಟ್ಟದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:11
37 ತಿಳಿವುಗಳ ಹೋಲಿಕೆ  

ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.


ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ! ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’” ಎಂದು ಹೇಳಿರಿ.


ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.


ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.


ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.


ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.


ಅವರು ನನ್ನ ಜನರಿಗೆ ಪವಿತ್ರವಾದದ್ದಕ್ಕೂ ಮತ್ತು ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧ ಹಾಗೂ ಅಶುದ್ಧಗಳ ಭೇದವನ್ನು ತಿಳಿಸಲಿ.


ನನ್ನ ಜನರೇ, ನೀವೆಲ್ಲರೂ ಬಾಬೆಲಿನೊಳಗಿಂದ ಹೊರಟು ಯೆಹೋವನ ರೋಷಾಗ್ನಿಯಿಂದ ತಪ್ಪಿಸಿಕೊಳ್ಳಿರಿ.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ಬಾಬೆಲ್ ದೇಶದೊಳಗಿಂದ ಓಡಿಹೋಗಿರಿ, ಕಸ್ದೀಯರ ಸೀಮೆಯಿಂದ ಹೊರಡಿರಿ; ಹಿಂಡುಗಳ ಮುಂದೆ ಹೋಗುವ ಹೋತಗಳಂತಿರಿ.


ಇದರಿಂದ ಶುದ್ಧ ಹಾಗು ಅಶುದ್ಧಗಳನ್ನು, ತಿನ್ನಬಹುದಾದ ಜೀವಿಗಳು ಮತ್ತು ತಿನ್ನಬಾರದಾದ ಜೀವಿಗಳ ಕುರಿತು ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು.’”


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.


“ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಿಬೇಕು.


ಅವನು ಇಸ್ರಾಯೇಲರ ಸಮೂಹದವರಿಗೆ, “ನೀವು ಈ ದುಷ್ಟರ ಡೇರೆಗಳ ಬಳಿಯಲ್ಲಿ ಇರದೆ ದೂರ ಹೋಗಬೇಕು; ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬಾರದು; ಇವರ ದೋಷಗಳಿಗಾಗಿ ಉಂಟಾಗುವ ಶಿಕ್ಷೆ ನಿಮ್ಮನ್ನೂ ಕೊಚ್ಚಿಕೊಂಡು ಹೋದೀತು” ಎಂದು ಹೇಳಿದನು.


“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು.


ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.


ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ಯೆಹೋವನು ಇಂತೆನ್ನುತ್ತಾನೆ, “ಚೀಯೋನ್ ನಗರಿಯೇ, ಉಲ್ಲಾಸಗೊಳ್ಳು, ಹರ್ಷಧ್ವನಿಗೈ! ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸಿಸುವೆನು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು