Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 52:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 52:13
22 ತಿಳಿವುಗಳ ಹೋಲಿಕೆ  

ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.


ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.


ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.


ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.


“‘ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ನೇಮಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.


ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.


ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು