ಯೆಶಾಯ 52:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು. ಅಧ್ಯಾಯವನ್ನು ನೋಡಿ |