ಯೆಶಾಯ 52:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, “ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು. ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ದೇವರಾದ ಸರ್ವೇಶ್ವರ ಹೇಳಿಕೊಳ್ಳುವುದೇನೆಂದರೆ : “ಹಿಂದೆ ನನ್ನ ಜನರು ಈಜಿಪ್ಟಿನಲ್ಲೆ ಇಳಿದುಕೊಳ್ಳಲು ಹೋದರು. ಕೊನೆಗೆ ಅಸ್ಸೀರಿಯರು ಅವರನ್ನು ನಿಷ್ಕಾರಣವಾಗಿ ಹಿಂಸಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕರ್ತನಾದ ಯೆಹೋವನು ಹೀಗಂದುಕೊಳ್ಳುತ್ತಾನೆ - ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ [ಅಲ್ಲಿ ಸೆರೆಯಾದರು]; ಅಶ್ಶೂರ್ಯರು ಹಕ್ಕಿಲ್ಲದೆ ಅವರನ್ನು ಬಾಧೆಪಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಮೊದಲು ಈಜಿಪ್ಟಿನಲ್ಲಿ ನೆಲೆಸಲು ಹೋಗಿ, ನಂತರ ಅಲ್ಲಿ ಅವರು ದಾಸರಾದರು. ಆ ಬಳಿಕ ಅಶ್ಶೂರವು ಅವರನ್ನು ಗುಲಾಮರನ್ನಾಗಿ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವುದಕ್ಕೆ ಈಜಿಪ್ಟಿಗೆ ಹೋದರು. ಅಸ್ಸೀರಿಯದವರು ಕಾರಣವಿಲ್ಲದೆ ಅವರಿಗೆ ಬಾಧೆಪಡಿಸಿದರು. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.