ಯೆಶಾಯ 52:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ” ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ವವನ್ನು ಒಂದು ದಿನ ಅರಿತುಕೊಳ್ಳುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದು [ತಮ್ಮ ಸಂಗಡ] ಮಾತಾಡುವವನು ನಾನೇ, ಹೌದು ನಾನೇ, ಎಂದು [ರಕ್ಷಣೆಯ] ಆ ದಿನದಲ್ಲಿ ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು. ಇದೇ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ಹೇಳುವುದೇನೆಂದರೆ, “ಜನರು ನನ್ನನ್ನು ತಿಳಿದುಕೊಳ್ಳಲೆಂದು ಹೀಗಾಯಿತು. ನಾನು ಯಾರೆಂದು ನನ್ನ ಜನರಿಗೆ ಗೊತ್ತಾಗುವದು. ನನ್ನ ಜನರಿಗೆ ನನ್ನ ಹೆಸರಿನ ಪರಿಚಯವಾಗುವದು. ‘ನಾನೇ’ ಎಂಬಾತನಾದ ನಾನೇ ಅವರ ಸಂಗಡ ಮಾತನಾಡುತ್ತಿದ್ದೇನೆ ಎಂದು ಅವರಿಗೆ ಗೊತ್ತಾಗುವದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಅದು ನಾನೇ ಎಂದು ಅವರು ಗ್ರಹಿಸುವರು.” ಅಧ್ಯಾಯವನ್ನು ನೋಡಿ |